ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣ: ರಾವ್ ಬದಲು ಖಾನ್ ಇದ್ದಿದ್ರೆ ಬಿಡ್ತಿದ್ರಾ..?- ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್….

Promotion

ಬೆಂಗಳೂರು,ಜ,23,2020(www.justkannada.in):  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣ ಸಂಬಂಧ ರಾವ್ ಬದಲು ಖಾನ್ ಇದಿದ್ರೆ ಬಿಡ್ತಿದ್ರಾ ಎಂದು ಬಿಜೆಪಿ ನಾಯಕರಿಗೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಟಾಂಗ್ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿರುವುದು ಸರಿಯಲ್ಲ.  ಒಂದು ವೇಳೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ಮುಸ್ಲೀಂ ಆಗಿದ್ರೆ ಸುಮ್ಮನೆ ಬಿಡುತ್ತಿರಲಿಲ್ಲ. ರಾವ್ ಬದಲು ಖಾನ್ ಆಗಿದ್ರೆ ಇವರು ಸುಮ್ಮನೆ ಬಿಡ್ತಿದ್ರಾ ಎಂದು ಕಿಡಿಕಾರಿದರು.

ಇನ್ನು ವಿಮಾನನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯರಾವ್ ಬಂಧನ ಪ್ರಕರಣ ಸಂಬಂಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಜಮೀರ್ ಅಹ್ಮದ್ ಖಾನ್ ಆಗ್ರಹಿಸಿದ್ದಾರೆ.

Key words: mangalore –airport-bomb-case-former minister-jameer Ahmad Khan