ಮಂಗಳೂರು ಹಿಂಸಾಚಾರ ಪ್ರಕರಣ: ಪೊಲೀಸರಿಂದಲೇ ದೌರ್ಜನ್ಯ ಆರೋಪ: 35 ವಿಡಿಯೋಗಳನ್ನ ಬಿಡುಗಡೆ ಮಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

Promotion

ಬೆಂಗಳೂರು,ಜ,10,2020(www.justkannada.in): ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದಲೇ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ 35 ಸ್ಪೋಟಕ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ.

ನಗರ  ಜೆಡಿಎಸ್‌  ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 35 ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪೊಲೀಸರಿಂದಲೇ ದೌರ್ಜನ್ಯ ನಡೆದಿದೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.  ಅಮಾಯಕ ವ್ಯಾಪಾರಸ್ಥರ ಮೇಲೂ ಲಾಠೀಚಾರ್ಜ್ ಆಗಿದೆ. ನಗರಕ್ಕೆ ಬಂದಿದ್ದ ಅಮಾಯಕರ ಮೇಲೆ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆದಿದೆ. ಪೌರತ್ವ ವಿರೋಧಿಸಿ 30 ಜಿಲ್ಲೆಗಳಲ್ಳೂ ಪ್ರತಿಭಟನೆ ಆಗಿದೆ. ಆದ್ರೆ ಮಂಗಳೂರಿನಲ್ಲಿ ಯಾಕಿಷ್ಟು  ದೌರ್ಜನ್ಯ ಆಗಿದೆ ಎಂದು ಪ್ರಶ್ನೆ ಹಾಕಿದ್ದಾರೆ.

ಇದಕ್ಕೆ ರಾಜ್ಯ ಸರಕಾರ ಕೂಡ ಬೆಂಬಲ ನೀಡಿದೆ.  ಘಟನೆ ಬಗ್ಗೆ ನಾನು ಕೆಲ ಮಾಃಇತಿಯನ್ನಕಲೆ ಹಾಕಿದ್ದೇನೆ.  ಅಂದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮಾಡಿದ್ದು ತಪ್ಪು.  ಸುದ್ದಿಗೋಷ್ಠಿ ನಡೆಸಬಾರದು ಎಂದು ಹೇಳಲು ಅವರು ಯಾರು. ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು. ಮಂಗಳೂರು ಪೊಲೀಸ್  ಆಯುಕ್ತ ಹರ್ಷರ ನಡೆ ಅನುಮಾನಸ್ಪದವಾಗಿದೆ. ಮ್ಯಾಜಿಸ್ಟ್ರೇಟ್ ತನಿಖೆಯಿಂದ ಏನು ಪ್ರಯೋಜನ ಇಲ್ಲ ಎಂದು ಹೆಚ್,ಡಿ ಕುಮಾರಸ್ವಾಮಿ ಹೇಳಿದ್ದಾರೆ.

Key words: Mangalore -golibar -case -Former CM- HD Kumaraswamy- released- 35 Explosive Video.