ರಾಜಕೀಯ ಸುದ್ದಿಗೆ ಹೆಚ್ಚು ಒತ್ತು ಬೇಡ, ಇದ್ರಿಂದ ಜನ್ರಿಗೆ ಯಾವುದೇ ಪ್ರಯೋಜನವಾಗದು : ಡಿಸಿಎಂ ಡಾ. ಅಶ್ವತ್ಥ ನಾರಾಯಣ

kannada t-shirts

 

ಮಂಗಳೂರು, ಮಾ.07, 2020 : ಪತ್ರಕರ್ತರು ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು. ಅದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ ಪತ್ರಕರ್ತರ ೩೫ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಶನಿವಾರ ಮಾತನಾಡಿದರು.

ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆ ಯಲ್ಲಿ ಪತ್ರಕರ್ತರು ವ್ರತ್ತಿಪರ ಮೌಲ್ಯ ವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ಸವಾಲಿನ ಕಾರ್ಯ ಎಂದವರು ಹೇಳಿದರು.

mangalore-media-sammellana-veerendra-heggede

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪರಿಣಾಮಕಾರಿಯಾದದ್ದು. ಪತ್ರಿಕೋದ್ಯಮವು ವಾಣೀಜ್ಯೀಕರಣಗೊಳ್ಳದೆ ಟ್ರಸ್ಟ್ ಕಾಯಿದೆ ಗೊಳಪಟ್ಟರೆ ಮಾಧ್ಯಮಗಳು ಮತ್ತು ಪತ್ರಕರ್ತರು ನೈತಿಕ ಸ್ಥೈರ್ಯ ವನ್ನು ಇನ್ನಷ್ಟು ಬಲಗೊಳಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿತ್ತು ಎಂದರು.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನದ ಉದ್ಘಾಟನೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನಡೆಯಿತು.
ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸಮ್ಮೇಳನದ ಆಶಯ ಭಾಷಣ ಮಾಡಿದರು.
ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.

media-mangalore-journalist-dcm

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ‌.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್ ನ ಮುಖ್ಯಸ್ಥರಾದ ಕಿಶೋರ್ ಆಳ್ವ, ಮುಖ್ಯ ಅತಿಥಿಗಳಾಗಿದ್ದರು.

key words : mangalore-media-sammellana-working-journalist-meet-dcm-ashwathnarayan

website developers in mysore