Monday, September 28, 2026

BDA Apartments

Home Front Page ಬಿಜೆಪಿ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ- ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ.

ಬಿಜೆಪಿ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ- ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ.

ಬಾಗಲಕೋಟೆ,ನವೆಂಬರ್,20,2023(www.justkannada.in): ಬಿಜೆಪಿ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ, ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು. ಅವರು ಪಕ್ಷಕ್ಕೆ ಬಂದಮೇಲೆ ಸ್ಥಾನಮಾನ ಬಗ್ಗೆ ಚಿಂತನೆ ಮಾಡಬೇಕು. ನಮ್ಮ ಪಕ್ಷದವರ ಸಹಮತವನ್ನು ಪಡೆದುಕೊಂಡು ಚರ್ಚೆ ಮಾಡುತ್ತೇವೆ. ಆಯಾ ಕ್ಷೇತ್ರದ ನಮ್ಮ ಮುಖಂಡರ ಜೊತೆ ಚರ್ಚಿಸುತ್ತೇವೆ ಎಂದರು.ಬಿಜೆಪಿ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ laxman savadi

ಸ್ವಇಚ್ಛೆಯಿಂದ ಬರುವವರನ್ನು ಗೌರವದಿಂದ ಬರಮಾಡಿಕೊಳ್ಳುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ತಿಳಿಸಿದರು.

Key words: Many -BJP leaders – touch- with –us- Congress -MLA- Laxman Savadi