ಸಚಿವ ಶ್ರೀರಾಮುಲು ಪುತ್ರಿ ಮದುವೆ ಸಂಭ್ರಮ: ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸೆಟ್ ನಿರ್ಮಾಣ ….

Promotion

ಬೆಂಗಳೂರು,ಮಾ,5,2020(www.justkannada.in):  ಬೆಂಗಳೂರು ಅರಮನೆ ಮೈದಾನದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಪುತ್ರಿ ರಕ್ಷಿತಾ ಅವರ ಮದುವೆ ಸಂಭ್ರಮ ಮನೆ ಮಾಡಿದೆ.

ಬೆಂಗಳೂರು ಅರಮನೆ ಮೈದಾನದಲ್ಲಿ ರಕ್ಷಿತಾ ಹಾಗೂ ಲಲಿತ್ ಸಂಜೀವ್ ರೆಡ್ಡಿ ವಿವಾಹ ಸಮಾರಂಭ ‌‌ ನಡೆಯಲಿದ್ದು ಮದುವೆಗಾಗಿ 40 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದೆ.  ಹಂಪಿ ವಿರುಪಾಕ್ಷೇಶ್ವರ ದೇವಸ್ಥಾನ ಹಾಗೂ ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾದರಿಯಲ್ಲಿ ಸೆಟ್ ನಿರ್ಮಾಣ ಮಾಡಲಾಗಿದೆ.

27 ಎಕರೆ ಮದುವೆ ಸೆಟ್, 4 ಎಕರೆಯಲ್ಲಿ ಮದುವೆ ಕಾರ್ಯ, 15 ಎಕರೆ ಪಾರ್ಕಿಂಗ್ ಮತ್ತು ಆರು ಎಕರೆ ಊಟಕ್ಕಾಗಿ ಸೆಟ್ ನಿರ್ಮಾಣ ಮಾಡಲಾಗಿದ್ದು  ಮುಹೂರ್ತ ಮಂಟಪದಲ್ಲಿ ನಾಲ್ಕು ಸಾವಿರ ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಹಾಗೆಯೇ ಏಳು ಸಾವಿರ ಮಂದಿ ಒಂದೇ ಬಾರಿ ಊಟ ಮಾಡುವಂತಹ ವ್ಯವಸ್ಥೆ ಮಾಡಲಾಗಿದ್ದು ಒಂದು ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಈ ನಡುವೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಮದುವೆ ಸಮಯದಲ್ಲಿ ಮೇಕಪ್ ಮಾಡಿದವರೇ ರಕ್ಷಿತಾಗೆ ಮೇಕಪ್ ಮಾಡಲಿದ್ದಾರೆ. ಉದ್ಯಮಿ ಅಂಬಾನಿ ಮಗನ ಮದುವೆ ಫೋಟೋ, ವೀಡಿಯೋ ತೆಗೆದ ಜಯರಾಮನ್ ಪಿಳ್ಳೈ ಜೊತೆ ದಿಲೀಪ್ ಅವರಿಂದ ಶ್ರೀರಾಮುಲು ಪುತ್ರಿಯ ಮುದುವೆ ಫುಲ್ ವಿಡಿಯೋ ಚಿತ್ರೀಕರಣವಾಗಲಿದೆ.

Key words: Marriage-celebration – – Minister –Sriramulu- daughter- huge set – 40 acres – palace grounds.