ಮೈಸೂರಿನಲ್ಲಿ ಮಾಸ್ಕ್ ಕಾರ್ಯಾಚರಣೆ: ಸಂಗ್ರಹವಾಗಿರುವ ದಂಡದ ಮೊತ್ತವೆಷ್ಟು ಗೊತ್ತೆ…?

mask-operation-mysore-amount-fines
Promotion

ಮೈಸೂರು,ಏಪ್ರಿಲ್,19,2021(www.justkannada.in):  ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದೇ ಓಡಾಡಿದರೇ ದಂಡವನ್ನ ಹಾಕಲಾಗುತ್ತಿದೆ. ಈ ಮಧ್ಯೆ ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಸಿದ್ದು ಮಾಸ್ಕ್ ಹಾಕದೇ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದ್ದಾರೆ.jk

ಮೈಸೂರು ನಗರದಲ್ಲಿ 51,099 ಕೇಸ್ ದಾಖಲಾಗಿದ್ದು, ನಗರದಲ್ಲಿ ಕಳೆದ ಏಳು ತಿಂಗಳಿನಿಂದ 1ಕೋಟಿ 37 ಲಕ್ಷದ 100ರೂ ದಂಡ ವಸೂಲಿ ಮಾಡಲಾಗಿದೆ. ನಿನ್ನೆ ಒಂದೇ ದಿನ 1494 ಕೇಸ್ ದಾಖಲಾಗಿದ್ದು, ಒಂದೇ ದಿನದಲ್ಲಿ 2,49,850 ರೂ ದಂಡ ವಸೂಲಿ ಮಾಡಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.mask-operation-mysore-amount-fines

Key words: Mask Operation –Mysore-amount- fines