ಪರಿಷತ್ ಒಳಗೆ ಮಾಸ್ಕ್ ಹಾಕದ, ಸಾಮಾಜಿಕ ಅಂತರ ಕಾಪಾಡದವರಿಗೆ ದಂಡ ವಿಧಿಸಿ : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಡಿಸೆಂಬರ್,17,2020(www.justkannada.in) : ಪರಿಷತ್ ಒಳಗೆ ಮಾಸ್ಕ್ ಹಾಕದವರಿಗೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದವರಿಗೆ, ದಂಡ ಹಾಕಬೇಕು. ಸಭಾಪತಿಗಳೇ ಈ ನಿರ್ಣಯ ಕೈಗೊಳ್ಳಲಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.Teachers,solve,problems,Government,bound,Minister,R.Ashok

ವಿಧಾನ ಪರಿಷತ್ ನಲ್ಲಿ ಗದ್ದಲ ವಿಚಾರ ಸಂಬಂಧಿಸಿದಂತೆ ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶವ್ಯಕ್ತಪಡಿಸಿದ್ದಾರೆ. ನಿಯಮ ಜನರಿಗೂ,  ಜನಪ್ರತಿನಿಧಿಗಳು ಎಲ್ಲರಿಗು ಒಂದೇ. ನಿಯಮ ಪಾಲಿಸದ ಜನಪ್ರತಿನಿಧಿಗಳಿಗೆ ದಂಡ ವಿಧಿಸಿ ಎಂದಿದ್ದಾರೆ.

ಜನ ಸಾಮಾನ್ಯರು ಈ ವಿಚಾರದಲ್ಲಿ ಎತ್ತಿರುವ ಧ್ವನಿ ನ್ಯಾಯಸಮ್ಮತ. ನಾನು ಆ ಪಕ್ಷ, ಈ ಪಕ್ಷ ಎಂದು ಮಾತಾನಾಡುತ್ತಿಲ್ಲ. ಎಲ್ಲರಿಗೂ ಒಂದೇ ನಿಯಮ ಅನ್ವಯ ಆಗಲಿ ಎಂದಷ್ಟೇ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೇಲ್ಮನೆ ರದ್ದತಿ ಮಾಡುವ ಚರ್ಚೆಯಿಲ್ಲ

Masked-inside-council-those-who-do-not-maintain-social- distance-Penalties-Minister-S.T.Somashekhar

ಮೇಲ್ಮನೆ ರದ್ದತಿ ಮಾಡುವಂತಹ ಯಾವುದೇ ಚರ್ಚೆಗಳು ಇಲ್ಲ. ಆಗಿರುವ ತಪ್ಪಿನ ಬಗ್ಗೆ ಸಭಾಪತಿಗಳು ಕ್ರಮ ಕೈಗೊಳ್ಳುತ್ತಾರೆ‌. ಈ ಬಗ್ಗೆ ಹೆಚ್ಚಿನ ಚರ್ಚೆಯು ಬೇಡ ಎಂದು ತಿಳಿಸಿದ್ದಾರೆ.

key words : Masked-inside-council-those-who-do-not-maintain-social- distance-Penalties-Minister-S.T.Somashekhar