ಮಸೂದ್ ಅಜರ್ ಜಾಗತಿಕ ಉಗ್ರ ಎಂದು ಘೋಷಣೆ ಹಿನ್ನೆಲೆ:  ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ…

Promotion

ಮೈಸೂರು,ಮೇ,2,2019(www.justkannada.in):  ಮಸೂದ್ ಅಜರ್ ನ ಜಾಗತಿಕ ಉಗ್ರ  ಎಂದು ಘೋಷಣೆ ಮಾಡಿದ ಹಿನ್ನೆಲೆ ಮೈಸೂರಿನಲ್ಲಿ  ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು. ಇದು ಭಯೋತ್ಪಾದನೆ ವಿರುದ್ಧ ಭಾರತಕ್ಕೆ ಸಿಕ್ಕ ಮತ್ತೊಂದು ಜಯ.ಈ ಮೂಲಕ ನರೇಂದ್ರ ಮೋದಿ ವಿಶ್ವನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.

ಮಸೂದ್ ಅಜರ್ ನ್ನು ಜಾಗತಿಕ ಉಗ್ರನ ಪಟ್ಟಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿಸಿದ್ದು, ಪುಲ್ವಾಮಾದಲ್ಲಿ ಭಾರತೀಯ ಸಿಆರ್ ಪಿಎಫ್  ಯೋಧರ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಉಗ್ರ ಮಸೂದ್  ಅಜರ್ ನನ್ನ ಉಗ್ರನೆಂದು ಘೋಷಿಸಬೇಕು ಎಂದು ವಿಶ್ವಸಂಸ್ಧೆಯ ಭದ್ರತಾ ಮಂಡಳಿಗೆ ಫ್ರಾನ್ಸ್, ಅಮೆರಿಕ, ಬ್ರಿಟನ್, ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಮನವಿ ಮಾಡಿದ್ದವು.

Key words: Masood Azar- Global-terrorist- celebration-Victory -BJP activists – Mysore