ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ….

ಮೈಸೂರು,ಡಿ,16,2019(www.justkannada.in): ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತ್ತಿದೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ  ನಗರದ ಪುರಭವನದಲ್ಲಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು ಪುರಭವನದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ

ಅಶೋಕ ರಸ್ತೆ, ಆಲ್ಬರ್ಟ್ ವಿಕ್ಟರ್ ರಸ್ತೆ, ಮಹಾವೀರ ವೃತ್ತ, ಗಾಂಧಿ ಚೌಕ ಸೇರಿದಂತೆ ಪುರಭವನ ಸುತ್ತಲಿನ 500 ಮೀ. ವ್ಯಾಪ್ತಿಯಲ್ಲಿ ನಿಷೇಧ ಜಾರಿ ಮಾಡಲಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಾವಿರಾರು ಮುಸ್ಲಿಂಮರು  ಬೃಹತ್ ಮೆರವಣಿಗೆ ನಡೆಸಿದರು. ಇನ್ನು ಟೌನ್ ಹಾಲ್ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ  ನಡೆಯುತ್ತಿರುವ  ಬೃಹತ್ ಪ್ರತಿಭಟನೆಗೆ 3000ಕ್ಕೂ ಹೆಚ್ಚು ಜನರು ಜಮಾವಣೆಗೊಂಡಿದ್ದು,ಗುಂಪು ಗುಂಪಾಗಿ  ಜನರು ಪ್ರತಿಭಟನೆಗೆ ಸೇರುತ್ತಿದ್ದು, ಪೊಲೀಸರ ಆದೇಶವನ್ನ ಲೆಕ್ಕಿಸದೆ ಪ್ರತಿಭಟನಾಕಾರರು ತಮ್ಮ ಹೋರಾಟ ಮುಂದುವರೆಸಿದ್ದಾರೆ.  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,  ಏಕಾಏಕಿ ಸೇರಿದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

key words: Massive protests – Mysore -against – Citizenship Amendment Act