ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ಪದಗ್ರಹಣ: ಬಿಜೆಪಿ ವಿರುದ್ಧ ಗುಡುಗು.

Promotion

ಬೆಂಗಳೂರು,ಮಾರ್ಚ್,28,2022(www.justkannada.in): ಈ ದೇಶ ಕಟ್ಟಿದ್ದು ಕಾಂಗ್ರೆಸ್.  ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ನಾಯಕರು ಪ್ರಾಣತ್ಯಾಗ ಮಾಡಿದ್ದಾರೆ. ಬಿಜೆಪಿಯಲ್ಲಿ ಸ್ವಾತಂತ್ರಕ್ಕಾಗಿ ಯಾರೂ ಹೋರಾಡಿಲ್ಲ. ಅಂಥವರು ನಮಗೆ ರಾಷ್ಟ್ರೀಯತೆ ಪಾಠ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಗುಡುಗಿದರು.

ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ಪದಗ್ರಹಣ ಮಾಡಿದರು. ಎಂ.ಬಿ ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾವುಟ ನೀಡಿದರು. ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ದಿನೇಶ್ ಗುಂಡೂರಾವ್ ಪರಮೇಶ್ವರ್.  ಕಾಂಗ್ರಸ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪದಗ್ರಹಣ ಬಳಿಕ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ದೇಶದಲ್ಲಿ  ಬ್ಯಾಂಕ್ ಗಳ ರಾಷ್ಟ್ರೀಕರಣ ಮಾಡಿದ್ದು ಕಾಂಗ್ರೆಸ್.  ಎಲ್ಲಾ ಅಣೆಕಟ್ಟೆಗಳ ನಿರ್ಮಾಣ ಮಾಡಿದ್ದು ಕಾಂಗ್ರೆಸ್.  ಮನ್ ಮೋಹನ್ ಸಿಂಗ್ ದೇಶಕ್ಕೆ ಹೊಸ ದಿಕ್ಕು ಕೊಟ್ಟರು.  ರೇಷನ್ ಕಾರ್ಡ್ ವ್ಯವಸ್ಥೆ ತಂದಿದ್ದು ಇಂದಿರಾ ಗಾಂಧಿ. ಅನ್ನಭಾಗ್ಯ ಯೋಜನೆ ಜಾರಿಮಾಡಿದ್ದು  ಮಾಜಿ ಸಿಎಂ ಸಿದ್ಧರಾಮಯ್ಯ.ಅವರು ಬಡವರ ಹಸಿವು ನೀಗಿಸಿದರು.  ಮಹಿಳೆಯರಿಗೆ ಉಚಿತ ಶಿಕ್ಷಣ ನೀಡಿದ್ದು ಸಿದ್ಧರಾಮಯ್ಯ. ಜನರಿಗೆ ಕಾಂಗ್ರೆಸ್ ಪಕ್ಷ ಶಕ್ತಿ ತುಂಬಬೇಕಿದೆ ಎಂದರು.

Key words: MB Patil – KPCC -campaign -committee –chairman