ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈದ್ಗಾ ಮೈದಾನದಲ್ಲಿ ಸಭೆ: ಫುಲ್ ಟ್ರಾಫಿಕ್ ಜಾಮ್…

ಬೆಂಗಳೂರು,ಡಿ,23,2019(www.justkannada.in):   ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ  ಪ್ರತಿಭಟನೆ ನಡೆಯುತ್ತಿದ್ದು ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.

ಈ ನಡುವೆ ಬೆಂಗಳೂರಿನ ಕಂಟೋನ್ಮೆಂಟ್ ಬಳಿಯ ಖದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲೀಂ ಸಮುದಾಯ  ಶಾಂತಿ ಸಭೆಯನ್ನ ನಡೆಸಿತು. ಈ ಹಿನ್ನೆಲೆ ಕಂಟೋನ್ಮೆಟ್ ಬಳಿ ಸುತ್ತಾಮುತ್ತಾ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.  ಶಾಂತಿಸಭೆಯಲ್ಲಿ ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿದ್ದರು. ರಸ್ತೆ ಬಳಿಯೇ ನಿಂತು ಶಾಂತಿಸಭೆಯಲ್ಲಿ ಪಾಲ್ಗೊಂಡ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನು ನಗರದಲ್ಲಿ 20ಕ್ಕೂ ಹೆಚ್ಚು ಸಂಘಟನೆಗಳು ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ, ಪ್ರತಿಭಟನೆಗೆ ಇಳಿದಿವೆ. ನಗರದ ಫ್ರೀಡಂ ಪಾರ್ಕ್, ಟೌನ್ ಹಾಲ್ ಮುಂದೆ ವ್ಯಾಪಕ ಸಂಖ್ಯೆಲ್ಲಿ ಪ್ರತಿಭಟನಾಕಾರರು ಭಾಗವಹಿಸಿ, ಪ್ರತಿಭಟನೆ ನಡೆಸುತ್ತಿರುವುದರಿಂದ, ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

Key words: Meeting – Eidgah grounds -opposition – Citizenship Amendment Act- Full- traffic jam.