ಗುಬ್ಬಿ ಶ್ರೀನಿವಾಸ್ ಜತೆ ಜೆಡಿಎಸ್ ಶಾಸಕರ ಭೇಟಿ; ವಿಶೇಷ ಅರ್ಥ ಬೇಡ ಎಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.

Promotion

ಬೆಂಗಳೂರು,ನವೆಂಬರ್,9,2022(www.justkannada.in):  ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ನಮ್ಮ ಶಾಸಕರು ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು ಸ್ನೆಹಪೂರ್ವಕವಾಗಿ ಭೇಟಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ  ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಇದು ಅವರ ವೈಯುಕ್ತಿಕವಾದ ಭೇಟಿ, ಈ ಮಾತನ್ನು ಅವರೇ ಹೇಳಿದ್ದಾರೆ. ನಾನೇನು ಮಧ್ಯಸ್ಥಿಕೆ‌ ವಹಿಸಿ ಯಾವುದೇ ಸಂದೇಶ ಕಳುಹಿಸಿಲ್ಲ. ಈಗಾಗಲೇ ಗುಬ್ಬಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ನಾಗರಾಜ್ ಈಗಾಗಲೇ ಪಕ್ಷದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಾ.ರಾ.ಮಹೇಶ್ ಮತ್ತು ಅನ್ನದಾನಿ ಅವರು ಭೇಟಿ ಮಾಡಿರುವ ಬಗ್ಗೆ ಅಪಾರ್ಥ ಬೇಡ. ಅದರ ಬಗ್ಗೆ ಹೆಚ್ಚು ಚರ್ಚೆಯೂ ಅಗತ್ಯ ಇಲ್ಲ ಎಂದು  ಹೆಚ್.ಡಿಕೆ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Key words: Meeting – JDS MLA- Gubbi Srinivas-  Former CM- HD Kumaraswamy