ಮೇಕೆದಾಟು ಯೋಜನೆ: ಪ್ರಧಾನಿ ಮೋದಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ.

Promotion

ಬೆಂಗಳೂರು,ಮಾರ್ಚ್,18,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ತಮಿಳುನಾಡು ಪದೇ ಪದೇ ಅಡ್ಡಗಾಲು ಹಾಕುತ್ತಿದ್ದು ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮೇಕೆದಾಟು ಯೋಜನೆ ಜಾರಿ ವಿಚಾರದ ಬಗ್ಗೆ ಇಂದು ವಿಧಾನ ಸೌಧದಲ್ಲಿ ಸರ್ವ ಪಕ್ಷಗಳ ಸಭೆ ನಡೆಸಲಾಯಿತು. ಪ್ರಧಾನಿ ಮೋದಿ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಅಲ್ಲದೆ ತಮಿಳುನಾಡು ವಿರೋಧಕ್ಕೆ ಕ್ಯಾರೆ ಮಾಡದಿರಲು ಸಭೆಯಲ್ಲಿ ಸಹಮತ ದೊರೆತಿದೆ.

ಮೇಕೆದಾಟು ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕಾನೂನು ತಜ್ಞರು ಸಹಮತ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಜೆಡಿಎಸ್ ನಾಯಕರು ಸೇರಿ ಹಲವರು ಉಪಸ್ಥಿತರಿದ್ದರು

 

Key words: mekedatu plan-all party-meeting