”ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ನಿಧನ”ಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಗಣ್ಯರ ಸಂತಾಪ…!

ಬೆಂಗಳೂರು,ಡಿಸೆಂಬರ್,29,2020(www.justkannada.in) :  ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ  ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ.  ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಂದ ಸಂತಾಪ

Methodist,Council,vice,president,death,Dharmagowda,CM BS Yeddyurappa,Former,Prime,Minister,HD DeveGowda,condolences,dignitaries ...

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ ಎಂದು ವಿಷಾದವ್ಯಕ್ತಪಡಿಸಿದ್ದಾರೆ.

ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರು  ವಿಧಾನಪರಿಷತ್ ಉಪಸಭಾಪತಿ, ಜೆಡಿಎಸ್ ನ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಧರ್ಮೇಗೌಡ ಅವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ ಸ್ವಭಾವದ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಅವರು ಈ ರೀತಿ ಅಂತ್ಯ ಕಂಡಿರುವುದು ನೋವಿನ ಸಂಗತಿ ಎಂದು ವಿಷಾದವ್ಯಕ್ತಪಡಿಸಿದ್ದಾರೆ.

ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.

ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ತಿನ ಮಾನ್ಯ ಉಪಸಭಾಪತಿಯವರಾಗಿದ್ದ ಎಸ್ ಎಲ್.ಧರ್ಮೇಗೌಡ ಅವರು ಅಕಾಲಿಕವಾಗಿ ಇಂದು ನಮ್ಮನ್ನಗಲಿರುವ ವಿಷಯ ತಿಳಿದು ನನಗೆ ದಿಗ್ಬ್ರಮೆ ಆಗಿದೆ.

ಸಹಕಾರಿ  ಕ್ಷೇತ್ರದಲ್ಲಿ ಗ್ರಾಮೀಣ ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಜಕೀಯ ಜೀವನದಲ್ಲಿ ಮಂಡಲ ಪಂಚಾಯತಿ ಪ್ರಧಾನ ಹುದ್ದೆಯಿಂದ ಇತ್ತೀಚಿನ ವಿಧಾನ ಪರಿಷತ್ತಿನ ಉಪ ಸಭಾಪತಿಯವರೆಗೆ ಹಲವು  ಹುದ್ದೆಗಳನ್ನು ಅಲಂಕರಿಸಿದ್ದರು.

Methodist-Council-vice-president-death-Dharmagowda-CM BS Yeddyurappa-Former-Prime-Minister-HD DeveGowda-condolences-dignitaries ...

ಅಕಾಲಿಕ ಮರಣದಿಂದ ವಿಧಾನ ಪರಿಷತ್ತು ಸೇರಿದಂತೆ ರಾಜ್ಯದ ಜನತೆಗೆ ತುಂಬಲಾರದ ನಷ್ಟ. ಅಗಲಿದ ಅವರ ಆತ್ಮಕ್ಕೆ ಸದ್ಗತಿ‌ ಪ್ರಾಪ್ತಿಯಾಗಲಿ ಮತ್ತು ಅವರ ಕುಟುಂಬ ವರ್ಗಕ್ಕೆ,ಅಭಿಮಾನಿ ಮತ್ತು ಸ್ನೇಹಿತರ ಬಳಗಕ್ಕೆ ಈ ನೋವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ENGLISH SUMMARY….

CM BSY, former PM HDD and others condole the death of Deputy Chairman of LC Dharmegowda
Bengaluru, Dec. 29, 2020 (www.justkannada.in): Chief Minister B.S. Yedyurappa has expressed his grief on the untimely demise of Legislative Council Deputy Chairman S.L. Dharmegowda.
In his message, the CM stated that the untimely demise of S.L. Dharmegowda is very unfortunate and has caused him deep pain. His work as an MLC and Deputy Chairman of LC was very good.
Former Prime Minister H.D. Devegowda has stated that he was shocked to see the news that the Deputy Chairman of LC and JDS leader S.L. Dharmegowda has committed suicide.Methodist-Council-vice-president-death-Dharmagowda-CM BS Yeddyurappa-Former-Prime-Minister-HD DeveGowda-condolences-dignitaries ...
In his message the former PM stated that he was a person with very good behavior and his demise is indeed a loss to the state and I pray to god to give the strength to his family members to overcome the grief.
Keywords: S.L. Dharmegowda/ Suicide/ leaders condolences/ grief

key words : Methodist-Council-vice-president-death-Dharmagowda-CM BS Yeddyurappa-Former-Prime-Minister-HD DeveGowda-condolences-dignitaries …