ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಕಿರುಕುಳ : ಮಹಿಳೆ ಆತ್ಮಹತ್ಯೆ.

Promotion

ಚಿಕ್ಕಮಗಳೂರು, ಅಕ್ಟೋಬರ್,7,2023(www.justkannada.in): ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ.

ದೇವೀರಮ್ಮ (64) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಡೂರಿನ ಗ್ರಾಮೀಣ ಕೂಟ ಫೈನಾನ್ಸ್​ 78 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಆದರೆ ಅರ್ಥಿಕ ಸಂಕಷ್ಟದಿಂದಾಗಿ ದೇವೀರಮ್ಮ  ಒಂದು ತಿಂಗಳಿನಿಂದ ಸಾಲದ ಕಂತನ್ನ ಮರುಪಾವತಿ ಮಾಡಿರಲಿಲ್ಲ ಎನ್ನಲಾಗಿದೆ.

ಸಾಲ ಮರುಪಾವತಿ ಮಾಡದ ಹಿನ್ನೆಲೆ ದೇವೀರಮ್ಮ ಅವರ ಮನೆ ಬಳಿ ಬಂದು ಕಿರುಕುಳ ನೀಡಿದ ಆರೋಪ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ.  ಸಿಬ್ಬಂದಿ ಕಿರುಕುಳಕ್ಕೆ ಮನನೊಂದ ದೇವೀರಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಗ್ರಾಮಿಣ ಕೂಟ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: micro finance – repay- loan- Woman -suicide.