ಬೊಮ್ಮಾಯಿ 6 ತಿಂಗಳ ಸಿಎಂ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಬಿ.ಸಿ ಪಾಟೀಲ್ ತಿರುಗೇಟು.

Promotion

ಚಿತ್ರದುರ್ಗ,ಫೆಬ್ರವರಿ,4,2022(www.justkannada.in): ಸಿಎಂ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸಚಿವ ಬಿಸಿ  ಪಾಟೀಲ್ ತಿರುಗೇಟು ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಅವರು ಬಿಜೆಪಿಯಲ್ಲಿ ವಕ್ತಾರರಾಗಿದ್ದಾರಾ.? ಅವರು ಭವಿಷ್ಯ ಹೇಳುವವರಾ.? ಇದರ ಬಗ್ಗೆ ಅವರಿಗೇನು ಗೊತ್ತು? ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಮೂಡಿಸಲು ಅವರು ಪ್ರಯತ್ನ ನಡೆಸಿದ್ದಾರೆ ಎಂದು ಕಿಡಿಕಾರಿದರು.

  ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಸಿ ಪಾಟೀಲ್, ಸಚಿವ ಸಂಪುಟ ವಿಸ್ತರಣೆ, ಪುನಾರಚನೆ  ಸಿಎಂ ಪರಮಾಧಿಕಾರ. ಸಂಪುಟ ವಿಸ್ತರಣೆ  ಮಾಡಿದ್ರೆ ಮಾಡಲಿ ಬಿಡಿ. ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಸಂಪುಟ ವಿಸ್ತರಣೆ ಬಗ್ಗೆ  ಸಿಎಂ ಅವರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

key words: minister-BC patil-chitradurga