ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ಎಂಬ ಸಿಎಂ ಬಿಎಸ್ ವೈ ಹೇಳಿಕೆ ಬಗ್ಗೆ ಸಚಿವ ಬಿ.ಸಿ ಪಾಟೀಲ್ ಪ್ರತಿಕ್ರಿಯಿಸಿದ್ದು ಹೀಗೆ.

Promotion

ಬೆಳಗಾವಿ,ಜೂನ್,7,2021(www.justkannada.in):  ನಾಯಕತ್ವ ಬದಲಾವಣೆ ವಿಚಾರ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದರಿಂದ ನೊಂದ ಸಿಎಂ ಬಿಎಸ್ ವೈ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂಬ ಹೇಳಿಕೆಯನ್ನ ನೀಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.jk

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ‘ಪ್ರತಿ ದಿನ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಇದರಿಂದಾಗಿ ಆಡಳಿತ ಯಂತ್ರದ ಮೇಲೆ ಪರಿಣಾಮ ಬಿರುತ್ತದೆ. ಅಲ್ಲದೇ ಅದು ಮಕ್ಕಳ ಆಟವಾಗುತ್ತದೆ. ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯುತ್ತದೆ. ಯಾರೋ ದೆಹಲಿಗೆ ಹೋಗಿ ಬಂದರೆ ಮುಖ್ಯಮಂತ್ರಿ ಬದಲಾವಣೆಗೆ ಹೋಗಿದ್ದಾರೆ ಎನ್ನಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಸಚಿವ ಬಿ.ಸಿ ಪಾಟೀಲ್ ತಿಳಿಸಿದರು.

ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ತಪ್ಪಿಲ್ಲ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆಯೇ ಹೊರತು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿಲ್ಲ. ಬದಲಾವಣೆ ಬಗ್ಗೆ ಹೈ ಕಮಾಂಡ್ ಯಾವುದೇ ಸೂಚನೆ ನೀಡಿಲ್ಲ ಎಂದು ಬಿ.ಸಿ ಪಾಟೀಲ್ ನುಡಿದರು.

Key words: Minister -BC Patil – CM BS yeddyurappa- statement -resignation