ಸಿದ‍್ಧರಾಮಯ್ಯ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ- ಸಚಿವ ಬಿಸಿ ಪಾಟೀಲ್ ಟಾಂಗ್.

Promotion

ಚಿತ್ರದುರ್ಗ,ಫೆಬ್ರವರಿ,11,2022(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಮೋದಿ ಸರ್ಕಾರ ದೇಶವನ್ನು ದಿವಾಳಿಗೆ ತಂದು ನಿಲ್ಲಿಸಿದೆ. ಸಬ್ ಕ ಸಾಥ್ ಸಬ್ ಕ ವಿಕಾಸ್ ಅಲ್ಲ ಇದು, ಸಬ್ ಕ ವಿನಾಶ್ ಸರ್ಕಾರ ಎಂದು ಟೀಕಿಸಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೃಷಿ ಸಚಿವ ಬಿಸಿ ಪಾಟೀಲ್ ಟಾಂಗ್ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಸಚಿವ ಬಿಸಿ ಪಾಟೀಲ್, ಪ್ರಧಾನಿ ಮೋದಿ ವಿಶ್ವನಾಯಕರಾಗಿದ್ದಾರೆ.  ಇದನ್ನ ಸಿದ್ಧರಾಮಯ್ಯಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಅವರ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

ಕೇಂದ್ರ ಸರ್ಕಾರದ ಸಾಲದ ಮಿತಿ ಮೀರಿದೆ ಎಂದು ಆರೋಪಿಸಿದ್ದ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಸಚಿವ ಬಿಸಿ ಪಾಟೀಲ್, ಅತಿ ಹೆಚ್ಚು ಸಾಲವಾಗಿದ್ದೇ ಸಿದ್ಧರಾಮಯ್ಯ ಅವಧಿಯಲ್ಲಿ . ನಾವು ಅಭಿವೃದ್ಧಿ ನಿಲ್ಲಿಸದೇ ಕೋವಿಡ್ ನಿರ್ವಹಣೆ ಮಾಡುತ್ತಿದ್ದೇವೆ ಯಾವ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಹೇಳಿ ಎಂದು ಕಿಡಿಕಾರಿದರು.

ಹಿಜಾಬ್ ವಿವಾದ ಕುರಿತು ಮಾತನಾಡಿದ ಬಿಸಿ ಪಾಟೀಲ್, ಒಬ್ಬರ ಮೇಲೋಬ್ಬರು ಆಪಾದನೆ ಮಾಡಬಾರದು. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಯೋಚಿಸಬೇಕು  ಮಕ್ಕಳನ್ನ ತಮ್ಮ ಹಿತಕ್ಕೆ ಬಳಸಿಕೊಳ್ಳಬಾರದು. ಉದ್ದೇಶಪೂರ್ವಕವಾಗಿ ಪ್ರಚೋದನೆ ಮಾಡಿದರೇ ಕ್ರಮ ಕೈಗೊಳ್ಳಲಾಗುವುದು ಎಂದರು.

Key words: minister-bc patil-siddaramaiah