ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಸಿ.ಪಿ ಯೋಗೇಶ್ವರ್.

Promotion

ವಿಜಯಪುರ,ಜೂನ್,29,2021(www.justkannada.in):   ವಿಜಯಪುರ ಜಿಲ್ಲೆಗೆ  ಪ್ರವಾಸದಲ್ಲಿರುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೀಶ್ವರ್  ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ.jk

ಇಂದು ಕಲಬುರಗಿ ಜಿಲ್ಲೆಯಿಂದ ವಿಜಯಪುರ ನಗರಕ್ಕೆ ಆಗಮಿಸಿದ ಸಚಿವ ಸಿ.ಪಿ ಯೋಗೇಶ್ವರ್, ನಗರದ ಹೊರ ವಲಯದಲ್ಲಿರುವ ಖಾಸಗಿ ಹೋಟೆಲ್‌ ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಭೇಟಿ ಮಾಡಿ ಸುಮಾರು ಅರ್ಧ ಗಂಟೆ ಮಾತುಕತೆ ನಡೆಸಿದರು.

ಖಾಸಗಿ ಹೊಟೇಲ್ ನಲ್ಲಿ ಸಚಿವ ಯೋಗೇಶ್ವರ್ ಅವರಿಗೆ ಹೂಗುಚ್ಚ ನೀಡಿ ಸ್ವಾಗತಿಸಿದ ಶಾಸಕ ಯತ್ನಾಳ್  ರಹಸ್ಯ ಮಾತುಕತೆ ನಡೆಸಿದರು ಎನ್ನಲಾಗಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ  ಪದೇ ಪದೇ ಅಸಮಾಧಾನ ವ್ಯಕ್ತಪಡಿಸುತ್ತಿರುವ ಈ ಉಭಯ ನಾಯಕರ ಭೇಟಿ, ಮಾತುಕತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Key words: Minister- CP Yogeshwar -met – MLA- Basanagouda Patil Yatnal-vijayapur