ತಮ್ಮ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟ ಸಚಿವ ಡಿ.ಕೆ ಶಿವಕುಮಾರ್…

Promotion

ಹುಬ್ಬಳ್ಳಿ,ಮೇ,9,2019(www.justkannada.in):  ಮೇ19 ರಂದು ಕುಂದಗೋಳ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಮ್ಮ  ಸ್ನೇಹಿತ ಸಿ.ಎಸ್ ಶಿವಳ್ಳಿ ಅವರನ್ನ ನೆನೆದು ಕಣ್ಣೀರಿಟ್ಟ ಘಟನೆ ನಡೆಯಿತು.

ಸಚಿವ ಸಿ.ಎಸ್ ನಿಧನ ಹಿನ್ನೆಲೆ ಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು ಸಿ,ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರನ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ಇಂಗಳಗಿ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಸಚಿವ ಡಿಕೆ. ಶಿವಕುಮಾರ್ ಭಾವುಕರಾದರು. ಕಾರ್ಯಕರ್ತರನ್ನು ಉದ್ದೇಶಿಸಿ ವೇದಿಕೆ ಮೇಲೆ ಮಾತನಾಡುತ್ತಿದ್ದ ಅವರು ಶಿವಳ್ಳಿ ಅವರನ್ನು ಕಳೆದುಕೊಂಡಿರುವುದು ಮನಸ್ಸಿಗೆ ಬಹಳ ನೋವನ್ನು ತಂದಿದೆ ಎಂದು ಹೇಳಿ ಕಣ್ಣೀರಿಟ್ಟರು.

ಶಿವಳ್ಳಿಯನ್ನು ಕಳೆದುಕೊಂಡು ನನಗೆ ನೋವಾಗಿದೆ. ಹೀಗಾಗಿ ನನಗೆ ಅಳು ಬಂದಿದೆ. ನಾನು ನಾಟಕ ಮಾಡುತ್ತಿಲ್ಲ . ಇದು ಶಿವಳ್ಳಿ ಎಲೆಕ್ಷನ್ ಅಲ್ಲ. ನಿಮ್ಮ ಎಲೆಕ್ಷನ್. ಶಿವಳ್ಳಿ ಪತ್ನಿ ಕುಸುಮಾ ಅವರು ಇಂದು ಚುನಾವಣೆಗೆ ನಿಂತಿದ್ದಾರೆ. ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರನ್ನು ಗೆಲ್ಲಿಸಿ ಮೈತ್ರಿ ಸರ್ಕಾರವನ್ನು ಬಲಗೊಳಿಸಿ ಎಂದು  ಮನವಿ ಮಾಡಿದರು.

Key words: Minister -DK Shivakumar- tears –remember-his friend