ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ…

kannada t-shirts

ಕಲ್ಬುರ್ಗಿ,ಮೇ,1,2021(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಜನತಾ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ನಡುವೆ ಕೋವಿಡ್ ತಡೆಗಟ್ಟಲು ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.jk

ಈ ಕುರಿತು ಕಲ್ಬುರ್ಗಿಯಲ್ಲಿ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವ ಚಿಂತನೆ ಇಲ್ಲ. ಮಹಾರಾಷ್ಟ್ರದಲ್ಲಿ  4 ವಾರದಿಂದ ಕರ್ಫ್ಯೂ ಇದೆ.  3ನೇ ವಾರದ ಬಳಿಕ ಅಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ ಎಂದರು.Minister -Dr. K. Sudhakar - complete -lockdown – state-corona

2 ಕೋಟಿ ಕೋವಿಡ್ ಲಸಿಕೆಗೆ ಆರ್ಡರ್ ಮಾಡಲಾಗಿದೆ. ಕರೋನ ಲಸಿಕೆ ನೀಡುವುದರಲ್ಲಿ ದಾಸ್ತಾನು ಕೊರತೆ ಇದ್ದು, ಈ ನಿಟ್ಟಿನಲ್ಲಿ ಇನ್ನೂ ಅಧಿಕೃತವಾಗಿ ರಾಜ್ಯದಲ್ಲಿ ಕರೊನ ಲಸಿಕೆಯನ್ನು ಇಂದು ನೀಡಲಾಗುತ್ತಿಲ್ಲ,  ಲಸಿಕೆ ಬಂದ ಬಳಿಕ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ಶೇ.80ರಷ್ಟು  ಸೋಂಕಿತರಲ್ಲಿ ಲಕ್ಷಣಗಳೇ ಇಲ್ಲ. ಕ್ರಿಟಿಕಲ್ ಇರುವವರು ಮಾತ್ರ ಆಸ್ಪತ್ರೆಗೆ ಹೋಗಬೇಕು ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Minister -Dr. K. Sudhakar – complete -lockdown – state-corona

website developers in mysore