ಪಕ್ಷೇತರ ಶಾಸಕರಿಗೆ  ಸಚಿವ ಸ್ಥಾನ ನೀಡಿದ್ರೆ ಬೆಂಕಿ ಹತ್ತಿಕೊಳ್ಳುತ್ತೆ- ಬಿಎಸ್ ಯಡಿಯೂರಪ್ಪ..

Promotion

ಕೊಪ್ಪಳ,ಜೂ,8,2019(www.justkannada.in): ಸಚಿವ ಸಂಪುಟ ವಿಸ್ತರಣೆ ವೇಳೆ ಪಕ್ಷೇತರ ಶಾಸಕರಿಗೆ ಸ್ಥಾನ ನೀಡಿದ್ರೆ ಸಮ್ಮಿಶ್ರ ಸರ್ಕಾರದಲ್ಲಿ ಬೆಂಕಿ ಹತ್ತಿಕೊಳ್ಳುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ಕೊಪ್ಪಳದಲ್ಲಿ ಬರ ಪರಿಶೀಲನೆಯಲ್ಲಿ ತೊಡಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಸಿಕ್ಕಿದೆ. ಸಂಪುಟ ವಿಸ್ತರಣೆಗಾಗಿ ಹಲವು ನಾಯಕರು ಕಾದು ಕುಳಿತಿದ್ದಾರೆ. ಈ ವೇಳೆ ಪಕ್ಷೇತರರಿಗೆ ಸ್ಥಾನ ನೀಡಿದರೇ ಬೆಂಕಿ ಹತ್ತಿಕೊಳ್ಳುತ್ತದೆ ಎಂದು ಹೇಳಿದರು.

ಜೂನ್ 12 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಮೂವರಿಗೆ ಸಚಿವ ಸ್ಥಾನ ನೀಡಲು ಸಮ್ಮಿಶ್ರ ಸರ್ಕಾರ ಮುಂದಾಗಿದೆ. ಈ ನಡುಗೆ ಹಿರಿಯ ನಾಯಕ ರಾಮಲಿಂಗರೆಡ್ಡಿ ಮತ್ತು ಇಬ್ಬರು ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Key words: minister – independent MLAs – fire-BS Yeddyurappa.