ದುರ್ಗಾಪರಮೇಶ್ವರಿ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಕೆ.ಎಸ್ ಈಶ್ವರಪ್ಪ….

Promotion

ಉಡುಪಿ,ಸೆ,25,2019(www.justkannada.in):  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಕುಟುಂಬ ಸಮೇತರಾಗಿ ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಉಡುಪಿಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ದೇವಸ್ಥಾನದ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಚಂಡಿಕಾಹೋಮ ನೆರವೇರಿಸಿದರು. ಖಾಸಗಿ ಭೇಟಿಯ ಸಲುವಾಗಿ ದೇವಸ್ಥಾನಕ್ಕೆ ಬಂದಿದ್ದ  ಸಚಿವ ಕೆ.ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ದುರ್ಗಪರಮೇಶ್ವರಿ ಸನ್ನಿಧಿಯಲ್ಲಿ ಹೋಮ, ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನದಲ್ಲಿ ಭೋಜನ ಪ್ರಸಾದ ಸ್ವೀಕರಿಸಿ  ಸಚಿವ ಕೆ.ಎಸ್ ಈಶ್ವರಪ್ಪ ವಾಪಸ್ಸಾದರು. ದೇವಾಲಯದ ವತಿಯಿಂದ ಸಚಿವರಿಗೆ ಗೌರವ ನೀಡಲಾಯಿತು.

Key words: Minister KS Eshwarappa –visit- udupi-Durgaparameshwari  temple