ಮೂರುವರೆ ವರ್ಷದ ಬಳಿಕ ಸಿಎಂ ಬಿಎಸ್ ವೈ ಚುನಾವಣಾ ನಿವೃತ್ತಿ ವಿಚಾರ: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಹೇಳಿಕೆಗೆ ಸಚಿವ ಮಾಧುಸ್ವಾಮಿ ಟಾಂಗ್….

Promotion

ಹಾಸನ,ಜ,20,2020(www.justkannada.in): ಮೂರುವರೆ ವರ್ಷದ ಬಳಿಕ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನಮ್ಮ ಬಳಿ ಹೇಳಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಗೆ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಟಾಂಗ್ ನೀಡಿದ್ದಾರೆ.

ಹಾಸನದಲ್ಲಿ ಇಂದು ಈ ಬಗ್ಗೆ ಮಾತನಾಡಿರುವ ಸಚಿವ ಜೆ.ಸಿ ಮಾಧುಸ್ವಾಮಿ,  ಅಂತಹ ಯಾವುದೇ ವಿಚಾರವನ್ನ ನಮ್ಮ ಬಳಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಲ್ಲ. ಬಿಎಸ್ ವೈ ನಾಯಕತ್ವದ ಮೇಲೆ ನಂಬಿಕೆ ಇದೆ. ಮುಂದೆ ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಹೇಳಿದ್ದಾರೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಸಂಪುಟ ವಿಸ್ತರಣೆ ಬಗ್ಗೆ ಹೇಳುವಷ್ಟು ದೊಡ್ಡವನು ನಾನಲ್ಲ. ಸಿಎಂ ಬಿಎಸ್ ವೈ ವಿದೇಶಿ ಪ್ರವಾಸದಿಂದ ಬಂದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಆಗಬಹುದು ಎಂದರು.

Key words: Minister – Madhuswamy –RSS leader-Kalladka Prabhakar- cm bs yeddyurappa- Electoral retirement