ಸೂಪರ್ ಸಿಎಂ ರೀತಿ ಸಚಿವ ಪ್ರಿಯಾಂಕ್ ಖರ್ಗೆ ವರ್ತಿಸುತ್ತಿದ್ದಾರೆ- ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿ.

Promotion

ದಾವಣಗೆರೆ,ಮೇ,30,2023(www.justkannada.in):  ತಂದೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದಕ್ಕೆ ಪುತ್ರ  ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದರು.

ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯಲ್ಲಿ ಮಾತನಾಡಿದ ಬಿಜೆಪಿ ನಾಯಕರ ಎಂ.ಪಿ ರೇಣುಕಾಚಾರ್ಯ, ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸುವಂತೆ ಆಗ್ರಹಿಸಿ ಅಭಿಯಾನ ಆರಂಭಿಸಲಾಗುತ್ತದೆ. ಜೂನ್ 1ರಿಂದ ಯಾರೂ 200 ಯೂನಿಟ್ ವರೆಗಿನ ವಿದ್ಯುತ್ ಬಿಲ್ ಕಟ್ಟಬೇಡಿ. ಒಂದು ವೇಳೆ ಏನಾದರೂ ಹಣ ಕೇಳಿದರೆ ನನಗೆ ಫೋನ್ ಮಾಡಿ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಪಾರವಾದ ಗೌರವ ಇದೆ. ಆದರೆ ಸಿಎಂ, ಡಿಸಿಎಂ ಗ್ಯಾರಂಟಿ ಕಾರ್ಡ್ ಮೇಲೆ ಸಹಿ ‌ಮಾಡಿದ್ದಾರೆ. ಅದ್ದರಿಂದ ಯಾವುದೇ ಕಂಡೀಷನ್ ಇಲ್ಲದೆ ಯೋಜನೆ ಜಾರಿಗೊಳಿಸಬೇಕು. ಜೂನ್ 1ರೊಳಗೆ ಜಾರಿಗೊಳಿಸದಿದ್ದರೆ ಮತ್ತೆ ಅಭಿಯಾನ ಆರಂಭಿಸುತ್ತೇವೆ ಎಂದು ರೇಣುಕಾಚಾರ್ಯ ಹೇಳಿದರು.

Key words: Minister-Priyank Kharge – acting -like – super CM-MP Renukacharya