ಸರ್ಕಾರಿ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಗೆ ಉ.ಪ್ರದೇಶ ಮಾದರಿ ದಂಡಕ್ಕೆ ಚಿಂತನೆ- ಸಚಿವ ಆರ್.ಅಶೋಕ್ ಹೇಳಿಕೆ…..

ಬೆಂಗಳೂರು.ಡಿ,27,2019(www.justkannada.in): ಪ್ರತಿಭಟನೆ ಸಮಯದಲ್ಲಿ ಸರ್ಕಾರಿ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಗೆ ಉತ್ತರ ಪ್ರದೇಶ ಮಾದರಿಯಲ್ಲಿ ದಂಡ ವಿಧಿಸುವ ಚಿಂತನೆ ನಡೆಸಲಾಗುತ್ತಿದೆಯೆಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ‘ಪ್ರತಿಭಟನೆ ಹೆಸರಲ್ಲಿ ಆಸ್ತಿ ಹಾನಿ ಮಾಡಿದ್ದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಉತ್ತರ ಪ್ರದೇಶದಲ್ಲಿ ಸಿಎಎ ವಿರುದ್ಧ ಪ್ರತಿಭಟಿಸಿ ಆಸ್ತಿ-ಪಾಸ್ತಿ ಹಾನಿ ಮಾಡಿದವರನ್ನು ಗುರುತಿಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಾರ್ಯ ಮಾಡಲಾಗುತ್ತಿದೆ.  ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಆಗಬೇಕು.  ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎಂದು ಆರ್. ಅಶೋಕ್ ತಿಳಿಸಿದರು.

ಹಾಗೆಯೇ ಈ ಸಂಬಂಧ ಕಾನೂನು ರೂಪಿಸಲು ಗೃಹ ಸಚಿವರಿಗೆ ಮನವಿ ಮಾಡುತ್ತೇನೆ.  ಮಂಗಳೂರು ಗಲಭೆ ಪೂರ್ವ ನಿಯೋಜಿತ ಎಂಬುದು ಸಿಸಿಟಿವಿ ಕ್ಯಾಮೆರಾಗಳ ದೃಶ್ಯದಿಂದ ಗೊತ್ತಾಗಿದೆ.  ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಬೇಕು.  ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಆರ್. ಅಶೋಕ್ ತಿಳಿಸಿದರು.

ಇನ್ನು ಆರ್.ಅಶೋಕ್ ಮಾತಿಗೆ  ಸಹಮತ ವ್ಯಕ್ತಪಡಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಗಲಭೆ ಮಾಡಿವರಿಂದಲೇ ಹಣ ವಸೂಲಿ ಮಾಡಬೇಕು, ಉತ್ತರ ಪ್ರದೇಶ ಮಾದರಿ ಇಲ್ಲಿಯೂ ಅನುಸರಿಸುವಂತೆ ಸಿಎಂ ಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಸಿಎಎ ವಿರುದ್ಧ ಪ್ರತಿಭಟನೆ ಉತ್ತರ ಪ್ರದೇಶದಲ್ಲಿ ತೀವ್ರವಾಗಿದ್ದು, ಪ್ರತಿಭಟನೆಯಲ್ಲಿ ಸರ್ಕಾರಿ ಆಸ್ತಿ ಹಾನಿ ಮಾಡಿದವರಿಗೆ ಸರ್ಕಾರ ನೊಟೀಸ್ ನೀಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿದೆ. 14 ಲಕ್ಷ ದಂಡವನ್ನೂ ವಿಧಿಸಿದೆ.

Key words: Minister -R Ashok – fines – damage- government property.