ಸಂಪುಟ ವಿಸ್ತರಣೆ ಯಾವಾಗ..? ಮಾಹಿತಿ ನೀಡಿದ ಸಚಿವ ರಾಮಲಿಂಗರೆಡ್ಡಿ..

Promotion

ಬೆಂಗಳೂರು,ಮೇ,25,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸುತ್ತಿದ್ದು ಈ ನಡುವೆ ಈ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ಸಂಪುಟ ವಿಸ್ತರಣೆ ಯಾವಾಗ ಆಗಲಿದೆ ಎಂಬ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗರೆಡ್ಡಿ, ಮೇ 27 ಅಥವಾ 28ಕ್ಕೆ ಸಂಪುಟ ವಿಸ್ತರಣೆಯಾಗುತ್ತದೆ  ಎಂದಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ಧರಾಮಯ್ಯ ಮತ್ತು ಡಿ ಶಿವಕುಮಾರ್ ಬಣ ಅಂತಾ ಯಾವುದೇ ಬಣ ಇಲ್ಲ ಎಲ್ಲರೂ ಒಂದೇ ಎಂದರು.

ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಹೈಕಮಾಂಡ್ ಕೊಡುವ ಖಾತೆ ನಿಭಾಯಿಸುವೆ.  ರಾಜ್ಯಪಾಲರು ವಾಪಸ್ ಆದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ  ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: minister-Ramalingareddy-cabinet-expansion