ಶಾಸಕ ಮಹೇಶ್ ಕುಮಟಳ್ಳಿಗೆ ಅನ್ಯಾಯವಾದ್ರೆ ರಾಜೀನಾಮೆ ಕೊಡ್ತೀನಿ ಎಂದ ಸಚಿವ ರಮೇಶ್ ಜಾರಕಿಹೊಳಿ

Promotion

ಬೆಂಗಳೂರು, ಫೆಬ್ರವರಿ 22, 2020 (www.justkannada.in): ಶಾಸಕ ಮಹೇಶ್ ಕುಮಟಳ್ಳಿಗೆ ಅನ್ಯಾಯವಾದ್ರೆ ರಾಜೀನಾಮೆ ನೀಡುವುದಾಗಿ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅವರ ತ್ಯಾಗದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಏನಾದ್ರೂ ಅನ್ಯಾಯವಾದ್ರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಬಿಗ್ ಶಾಕ್ ನೀಡಿದ್ದಾರೆ.

ಭವಿಷ್ಯದಲ್ಲಿ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಸಿಗಬಹುದು, ಒಂದು ವೇಳೆ ಅನ್ಯಾವಾದರೆ ನನ್ನ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.