ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಸಚಿವ ಎಸ್. ಅಂಗಾರ.

Promotion

ಮಂಗಳೂರು,ಏಪ್ರಿಲ್,12,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆಗೆ 189 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು  ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಎಂಎಲ್ಸಿ ಆರ್, ಶಂಕರ್  ಪಕ್ಷಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೆ ಇದೀಗ ಸಚಿವ ಎಸ್. ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.    

ಸುಳ್ಯ ಕ್ಷೇತ್ರದಿಂಧ ಟೆಕೆಟ್ ಆಕಾಂಕ್ಷಿಯಾಗಿದ್ದ  ಸಚಿವ ಎಸ್. ಅಂಗಾರ ಅವರು ಟಿಕೆಟ್ ಕೈತಪ್ಪಿರುವ ಹಿನ್ನೆಲೆ  ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ. ಅಲ್ಲದೆ  ಚುನಾವಣಾ ಪ್ರಚಾರಕ್ಕೂ ಹೋಗದಿರಲು ಅಂಗಾರ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಅಂಗಾರ , ಬಿಜೆಪಿ ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸಿಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ ಹೀಗಾಗಿ ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ, ಚುನಾವಣಾ ಪ್ರಚಾರಕ್ಕೂ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

Key words: Minister- S. Angara -goodbye -electional politics