ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…

Promotion

ವಿಜಯಪುರ,ಏಪ್ರಿಲ್,23,2021(www.justkannada.in): ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.jk

ಈ ವೇಳೆ ಮಾತನಾಡಿದ ಸಚಿವ ಶಶಿಕಲಾ ಜೊಲ್ಲೆ,  ಕಡ್ಡಾಯವಾಗಿ ಮಾಸ್ಕ್ ಧರಿಸುವದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವದು ಹಾಗೂ ನಿಯಮಿತವಾಗಿ ಸ್ಯಾನಿಟೈಸರ್ ಬಳಕೆಯಿಂದ ಈ ಕೊರೊನಾದಿಂದ ರಕ್ಷಿಸಿಕೊಳ್ಳಬಹುದು ಎಂದು ಹೇಳಿದರು. Minister - Shashikala Jolle- Covid –Awareness-distribute-mask- redrose

ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಈ ಜಾಥಾ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಉಚಿತ ಮಾಸ್ಕ್ ಹಾಗೂ ಗುಲಾಬಿ ಹೂ ನೀಡಿ ಅರಿವು ಮೂಡಿಸಲಾಯಿತು. ಪ್ರಮುಖವಾಗಿ ಶಾಸ್ತ್ರಿ ಮಾರುಕಟ್ಟೆಯಲ್ಲಿ ಸಂಚರಿಸಿ ಅಂಗಡಿ ಮಾಲೀಕರಿಗೆ ಹಾಗೂ ವ್ಯಾಪಾರಿಗಳಿಗೆ ತಿಳುವಳಿಕೆ ಮೂಡಿಸಲಾಯಿತು.  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಗೋವಿಂದರೆಡ್ಡಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್, ಬಿಜೆಪಿ  ಮುಖಂಡರಾದ ವಿಜುಗೌಡ ಪಾಟೀಲ್ ಹಾಜರಿದ್ದರು.

Key words: Minister – Shashikala Jolle- Covid –Awareness-distribute-mask- redrose