ಮೈಸೂರಿನಲ್ಲಿ ಮೊಬೈಲ್ ಕ್ಲಿನಿಕ್ ಗೆ ಸಚಿವ ಸೋಮಶೇಖರ್ ಚಾಲನೆ

ಮೈಸೂರು, ಏಪ್ರಿಲ್ 29, 2020 (www.justkannada.in): ಮನೆ ಮನೆಗೆ ವೈದ್ಯಕೀಯ ಸೇವೆ ತಲುಪಿಸಲು ನೂತನ ಕೋವಿಡ್ -19 ಮೊಬೈಲ್ ಕ್ಲಿನಿಕ್ ವ್ಯವಸ್ಥೆಯನ್ನು ಹೊಂದಿರುವ ಮೊಬೈಲ್ ವ್ಯಾನ್ ಗಳ ಸೇವೆಗೆ ಚಾಲನೆ ನೀಡಲಾಗಿದೆ. ನಂಜನಗೂಡಿಗೂ ಸಹ ಈ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಮೈಸೂರು ಜಿಲ್ಲೆಯನ್ನು ಕೊರೋನಾ ಮುಕ್ತ ಮಾಡಲು ಜಿಲ್ಲಾಡಳಿತ ಹಾಗೂ ವೈದ್ಯಕೀಯ ಸಿಬ್ಬಂದಿ ಉತ್ತಮ ಕಾರ್ಯವನ್ನು ಮಾಡುತ್ತಿದ್ದಾರೆ. ಅವರಿಗೆ ನನ್ನ ಹಾಗೂ ಸರ್ಕಾರದ ಪರವಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಇತರರು ಇದ್ದರು.
ಆಶಾ ಕಾರ್ಯತರ್ತೆಯರ ಸಹಾಯಧನ ವಿತರಣೆ
ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ತಲಾ 2 ಸಾವಿರ ರೂಪಾಯಿಯಂತೆ ಪ್ರೋತ್ಸಾಹಧನವನ್ನು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚುವರಾದ ಎಸ್.ಟಿ.ಸೋಮಶೇಖರ್ ಅವರು ವಿತರಿಸಿದರು.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿರುವ ಹಾಲು ಉತ್ಪಾದಕ ಸಹಕಾರ ಸಂಘಗಳು ಮತ್ತು ವ್ಯವಸಾಯ ಸೇವಾ ಸಹಕಾರ ಸಂಘಗಳಿಂದ 2000 ರೂಪಾಯಿಯಿಂದ 5000 ರೂಪಾಯಿವರೆಗೆ ದೇಣಿಗೆ ಸಂಗ್ರಹಿಸಿದ್ದು, ಮೈಸೂರು ನಗರ ಪಾಲಿಕೆ ಆವರಣದಲ್ಲಿ ಸಾಂಕೇತಿಕವಾಗಿ 94 ಮಂದಿ ಆಶಾಕಾರ್ಯಕರ್ತೆಯರಿಗೆ ತಲಾ 2 ಸಾವಿರ ರೂಪಾಯಿಯಂತೆ ಸಚಿವರು ವಿತರಿಸಿದರು.