ಯುವ ದಸರಾ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಎಸ್.ಟಿ.ಸೋಮಶೇಖರ್.

ಮೈಸೂರು, ಸೆಪ್ಟೆಂಬರ್,27, 2022(www.justkannada.in): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಸೆ.28ಕ್ಕೆ “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಯುವ ದಸರಾದಲ್ಲಿ ಗೋಲ್ಡ್ ಪಾಸ್ ಹೊರತುಪಡಿಸಿ ಯಾವುದೇ ಪಾಸ್ ಇರುವುದಿಲ್ಲ ಎಂದರು.

ಯುವ ಸಂಭ್ರಮ/ಯುವ ದಸರಾ ಉಪ ಸಮಿತಿ ವತಿಯಿಂದ ನಾಳೆಯಿಂದ ಅ.3ರವರೆಗೆ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಯುವ ದಸರಾ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ದಿ.ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಹಾಗೂ ನಟ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.  ನಾಳೆ ಸಂಜೆ 7ಗಂಟೆಯಿಂದ ಅಪ್ಪು ನಮನ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಹಿನ್ನೆಲೆ ಗಾಯಕರಾದ ಗುರುಕಿರಣ್, ವಿಜಯ ಪ್ರಕಾಶ್, ಕುನಾಲ್ ಗಾಂಜಾವಾಲ ಕಾರ್ಯಕ್ರಮ ನೀಡಲಿದ್ದಾರೆ.

ಸೆಪ್ಟಂಬರ್ 29ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ, ಪವನ್ ಡ್ಯಾನ್ಸರ್ ಹಾಗೂ ಇತರರಿಂದ ನೃತ್ಯ ರೂಪಕ, ಹಿನ್ನೆಲೆ ಗಾಯಕಿ ಕನ್ನಿಕಾ ಕಪೂರ್ ರವರಿಂದ ಸಂಗೀತ ರಸಸಂಜೆ ನಡೆಯಲಿದೆ.

ಸೆ.30ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ಕಲಾವಿದರಿಂದ ಕಾರ್ಯಕ್ರಮ, ಲೇಸರ್ ಆಕ್ಟ್ & ಸಿಗ್ನೇಚರ್ ಗ್ರೂಪ್ ನೃತ್ಯ ತಂಡದಿಂದ ನೃತ್ಯ ರೂಪಕ, ಸ್ಯಾಂಡಲ್ ವುಡ್ ನೈಟ್ ನಡೆಯಲಿದೆ.

ಅ.1ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಹಿನ್ನೆಲೆ ಗಾಯಕ ಸೋನು ನಿಗಮ್, ಗಾಯಕಿ  ಡಾ.ಶಮಿತಾ ಮಲ್ನಾಡ್ ರಿಂದ ಸಂಗೀತ ರಸಮಂಜರಿ ಇರಲಿದೆ.

ಅ.2ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಖ್ಯಾತ ಚಿತ್ರತಾರೆಯರಾದ ಹರ್ಷಿಕಾ ಪೂಣಚ್ಚ, ವಿಜಯ ರಾಘವೇಂದ್ರ ಅವರಿಂದ ಕನ್ನಡ ಸ್ಟಾರ್ ನೈಟ್, ಗಾಯಕಿ ಮಂಗ್ಲಿ ಅವರಿಂದ ಸಂಗೀತ ರಸಮಂಜರಿ, ಗಾಯಕ ಅಮಿತ್ ತ್ರಿವೇದಿ ಅವರಿಂದ ಸಂಗೀತ ರಸಮಂಜರಿ ನಡೆಯಲಿದೆ.

ಅ.3ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸುಪ್ರಿಯಾ ರಾಮ್ &ಮಹಿಳಾ ಬ್ಯಾಂಡ್ ತಂಡದವರಿಂದ ಪ್ರದರ್ಶನ, ಫ್ಯಾಷನ್ ಶೋ, ಗಾಯಕಿ ಸುನಿಧಿ ಚೌಹಾಣ್ ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಯುವ ದಸರಾ ಉಪ ಸಮಿತಿ ವಿಶೇಷಾಧಿಕಾರಿ ಆರ್.ಚೇತನ್ ಇದೇ ವೇಳೆ ತಿಳಿಸಿದರು.

ಭಿತ್ರಿ ಪತ್ರ ಬಿಡುಗಡೆ ಸಮಾರಂಭದಲ್ಲಿ ಸಂಸದ ಪ್ರತಾಪ್ ಸಿಂಹ,  ಮೇಯರ್ ಶಿವಕುಮಾರ್, ಸಮಿತಿಯ ಕಾರ್ಯಾಧ್ಯಕ್ಷ ವೆಂಕಟರಾಜು ಎನ್ ಸಿ, ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಎಂ.ಬದರೀಶ್, ಸಂತೋಷ್ ಕುಮಾರ್, ಎಂ.ಮಹೇಂದ್ರ, ಕಾರ್ಯದರ್ಶಿ ಆಶಾದ್ ರೆಹಮಾನ್ ಷರೀಫ್, ಡಾ.ನಿಂಗರಾಜು ಆರ್ ಮತ್ತಿತರರು ಉಪಸ್ಥಿತರಿದ್ದರು.

Key words: Minister -ST Somasekhar- released -Yuva Dussehra -poster.

ENGLISH SUMMARY…

Minister S.T. Somashekar releases Yuva Dasara posters
Mysuru, September 27, 2022 (www.justkannada.in): Minister for Cooperation and Mysuru District Incharge Minister S.T. Somashekar today released the Yuva Dasara poster.
Speaking to the media after releasing the poster, S.T. Somashekar informed that the ‘Appu Namana’ program will be held on September 28. “Thousands of people are already visiting Mysuru to witness Dasara. Everything is going on smoothly. Except gold pass, no other passes will be allowed for the Yuva Dasara.”
The Yuva Sambhrama/ Yuva Dasara Sub-Committee will conduct the programs of the Yuva Dasara from tomorrow, till October 3, at the Maharaja College grounds, from 6.00 pm to 10.00 pm.
Late actor Puneeth Rajkumar’s wife Ashwini and actor Shivrajkumar will participate in the Yuva Dasara program tomorrow as special guests. MLA L. Nagendra will preside. The ‘Appu Namana’ program will begin at 7.00 pm tomorrow. There will be a musical nite by renowned playback singer and music director Gurukiran, Vijayaprakashand Kunal Ganjawala.
On September 29, winners of the Yuva Sambhrama will present dance program, along with dance programs by local dance teams, Pavan Dancer and others. Also there will be a musical program by playback singer Kannika Kapoor.
On September 30, a laser act and dance ballet by signature group will be held, followed by Sandalwood night.
On October 1, the winners of Yuva Sambhrama will present a dance program, followed by musical nite by renowned playback singer Sonu Nigam and singer Dr. Shamita Malnad.
On October 2, besides dance program by the winners of Yuva Sambhrama, there will be star nite comprising sandalwood stars Harishika Poonacha, Vijay Raghavendra, a musical program by renowned playback singer of Tollywood Mangli and singer Amit Trivedi.
On October 3, there will be a program by Supriya Ram and Women team, followed by a fashion show, musical program by renowned playback singer Sunidhi Chowhan.
MP Pratap Simha, Mayor Shivakumar, Committee Working President Venkataraju N.C., President Kiran Gowda, Vice-Presidents M. Badareesh, Santhosh Kumar, M. Mahendra, Secretary Ashad Rehman Shariff, Dr. Ningaraju R. and others were present.
Keywords: Yuva Dasara/ September 28/ poster release