ಆರ್.ಆರ್ ನಗರ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಆಯ್ಕೆ ವಿಳಂಬಕ್ಕೆ ಸ್ಪಷ್ಟನೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್…

ಬೆಂಗಳೂರು,ಅಕ್ಟೋಬರ್,12,2020(www.justkannada.in): ನವೆಂಬರ್ 3 ರಂದು ಆರ್, ಆರ್ ನಗರ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ವಿಳಂಬವಾಗುತ್ತಿರುವುದಕ್ಕೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಆರ್, ಆರ್ ನಗರ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಆದರೆ ನಮ್ಮ ನಾಯಕರು ಬಿಹಾರ ಚುನಾವಣೆ ಬ್ಯುಸಿಯಲ್ಲಿದ್ದಾರೆ. ಹೀಗಾಗಿ ಅಭ್ಯರ್ಥಿ ಆಯ್ಕೆಯಲ್ಲಿ ವಿಳಂಬವಾಗಿದೆ. ಆರ್ ಆರ್ ನಗರದಿಂದ ಮುನಿರತ್ನ ಅವರಿಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.Minister -ST Somashekhar -clarified - delay - selection -f BJP candidate - RR Nagar constituency

ಟಿಕೆಟ್ ವಿಚಾರದಲ್ಲಿ ಯಾವುದೇ ಸಂಘರ್ಷವಿಲ್ಲ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್16 ಕೊನೆ ದಿನ. ಹೀಗಾಗಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಬಗ್ಗೆ ನಿರ್ಧಾರ ಮಾಡುತ್ತದೆ. ಒಂದು ವೇಳೆ ಟಿಕೆಟ್ ನೀಡುವುದು ನನ್ನ ಕೈಯಲ್ಲಿದ್ದರೆ ನಾನೇ ಮುನಿರತ್ನ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿದ್ದೆ. ಆದರೆ, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರತಿಯೊಂದನ್ನೂ ಕೂಲಂಕಶವಾಗಿ ಪರಿಶೀಲಿಸಿ ತೀರ್ಮಾನಿಸುತ್ತದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: Minister -ST Somashekhar -clarified – delay – selection -f BJP candidate – RR Nagar constituency