ಸಚಿವ ಸುಧಾಕರ್ ಹಿಂದೆ ಯಾವ ಪಕ್ಷದಲ್ಲಿದ್ದರು..? ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಿದ್ಧರಾಮಯ್ಯ ತಿರುಗೇಟು.

Promotion

ಬೆಂಗಳೂರು,ಜನವರಿ,23,2023(www.justkannada.in): ತಮ್ಮ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಸುಧಾಕರ್  ಹಿಂದೆ ಯಾವ ಪಕ್ಷದಲ್ಲಿದ್ದರು..?  ಈಗ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ.  ಲಸಿಕೆ. ಬೆಡ್ ನಲ್ಲಿ ಹಣ ಮಾಡಿದ್ದು ಇವರೇ ಅಲ್ಲವೇ..?  ಕೊರೋನಾ ಸಮಯದಲ್ಲಿ ಲೂಟಿ ಮಾಡಿದ್ದು ಸುಧಾಕರ್ ತಾನೇ..? ನಮ್ ಮುಖ ಚನ್ನಾಗಿದೆ. ಕನ್ನಡಿಯಲ್ಲಿ ನಿಮ್ಮ ಮುಖ ನೋಡಿಕೊಳ್ಳಿ 60 ವರ್ಷ ನಾವು ಲೂಟಿ ಮಾಡಿದ್ರೆ ತನಿಖೆ ನಡೆಸಿ ಎಂದು ಗುಡುಗಿದರು.

ಡಿಸಿಪಿ, ಎಸ್ಪಿ ಪೋಸ್ಟಿಂಗ್  ಗೂ ಲಂಚ ಕೊಡಬೇಕು. ಎಲ್ಲಾ ಕಡೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಮೌನ ಪ್ರತಿಭಟನೆ ನಡೆಸುತ್ತೇವೆ. ಬೆಂಗಳೂರು ನಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಬಿಜೆಪಿಗೆ ಭಯವಿದೆ. ಹೀಗಾಗಿ ಬಿಬಿಎಂಪಿ ಚುನಾವಣೆ ನಡೆಸುತ್ತಿಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

Key words: Minister –Sudhakar- which –party-former CM-Siddaramaiah