ನನಗೆ ಅವಕಾಶ ಸಿಕ್ಕರೇ ಒಳ್ಳೆಯ ಕೆಲಸ ಮಾಡಿ ತೋರಿಸುತ್ತೀನಿ- ಸಿಎಂ ಆಗುವ ಆಸೆ ಬಿಚ್ಚಿಟ್ಟ ಸಚಿವ ಉಮೇಶ್ ಕತ್ತಿ.

ಬೆಂಗಳೂರು,ಜುಲೈ,22,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಸುಳಿವು ನೀಡಿದ ಬೆನ್ನಲ್ಲೆ ಆಹಾರ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ನನಗೆ ಅವಕಾಶ ಸಿಕ್ಕರೇ ಒಳ್ಳೆ ಕೆಲಸ ಮಾಡಿ ತೋರಿಸುತ್ತೀನಿ. ಸಿಎಂ ರೇಸ್ ನಲ್ಲಿ ನನ್ನನ್ನೂ ಕ್ಲೇಮ್ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.jk

ಈ ಬಗ್ಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ,  ಸಿಎಂ ರಾಜೀನಾಮೆ ಕೊಟ್ಟ ಮೇಲೆ ಸಂಪುಟ ಹೋಗುತ್ತೆ.  ಹೊಸ ಸಂಪುಟ ಏನಾಗುತ್ತೆ ಎಂಬ ಮಾತು ಬೇಡ. ಸಿಎಂ ರೇಸ್ ನಲ್ಲಿ  ನಾನು ಇದ್ದೇನೆ. ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಯೂ ಇದೆ. ಮನುಷ್ಯ ಸಹಜ ಆಸೆಯೂ ಇದೆ ಎಂದು ಹೇಳಿದರು.

ನಾನು ಈಗ ಹೈಕಮಾಂಡ್ ಭೇಟಿಗೆ ಹೋಗುವುದಿಲ್ಲ. ಬಿಜೆಪಿಯಲ್ಲಿ 75 ವರ್ಷದ ಲಿಮಿಟ್ ಇದೆ. ಯಡಿಯೂರಪ್ಪ ಅವರಿಗೆ 80 ವರ್ಷ ಹತ್ತಿರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಅವರೂ ಬದ್ದರಾಗಿರುತ್ತಾರೆ. ನಾವೂ ಬದ್ದರಾಗಿರುತ್ತೇವೆ ಎಂದು ಉಮೇಶ್ ಕತ್ತಿ ತಿಳಿಸಿದರು.covid-Don't -know - I want – stay- Minister Umesh katti

ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಉತ್ತರ ಕರ್ನಾಟಕ ಭಾಗದವರಿಗೆ ಅವಕಾಶ ನೀಡಬೇಕು. ಆ ಭಾಗದ ಯಾವುದೇ ಸಮುದಾಯದವರು ಸಿಎಂ ಆದರೂ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

Key words: minister-Umesh katti, – aspires – become -CM.