ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಅರ್ಜಿ: ವಿಚಾರಣೆ ಮುಂದೂಡಿದ ಕೋರ್ಟ್.

ಬೆಂಗಳೂರು,ಮಾರ್ಚ್,28,2022(www.justkannada.in): ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಮೇಲೆ ಬಂಧನ ಭೀತಿ ಎದುರಾಗುವ ಹಿನ್ನೆಲೆ ಸಚಿವ ವಿ. ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ವಿಚಾರಣೆಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಾರ್ಚ್ 30ಕ್ಕೆ ಮುಂದೂಡಿದೆ.

ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಮೇಲೆ ಸಚಿವ ವಿ.ಸೋಮಣ್ಣ ವಿರುದ್ಧ 2013ರಲ್ಲಿ ರಾಮಕೃಷ್ಣ ಎಂಬುವವರು ದೂರು ಸಲ್ಲಿಸಿದ್ದರು. ಈ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಲೋಕಯುಕ್ತ ಪೋಲಿಸರಿಗೆ ಕೋರ್ಟ್ ಸೂಚಿಸಿತ್ತು. ಆದಾಯ ಮೀರಿ ಆಸ್ತಿಗಳಿಸಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್  ಸಲ್ಲಿಸಿದ್ದರು. ಇದನ್ನ ಕೋರ್ಟ್ ತಿರಸ್ಕರಿಸಿ ಏಪ್ರಿಲ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಸಚಿವ ವಿ.ಸೋಮಣ್ಣಗೆ ಸಮನ್ಸ್ ಜಾರಿ ಮಾಡಿತ್ತು.

ಈ ನಡುವೆ ಬಂಧನ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಅರ್ಜಿ ಸಲ್ಲಿಸಿದ್ದು,  ಕೋರ್ಟ್ ವಿಚಾರಣೆಯನ್ನ ಮಾರ್ಚ್ 30ಕ್ಕೆ ಮುಂದೂಡಿದೆ. ಅಲ್ಲದೆ ಆಕ್ಷೇಪಣೆ ಸಲ್ಲಿಸಲು ದೂರುದಾರ ಪರ ವಕೀಲರಿಗೆ ಸೂಚನೆ ನೀಡಿದೆ.

Key words: Minister- v. Somanna – anticipatory –bail-court