ಶಾಸಕ ಪ್ರೀತಂ ಗೌಡಗೆ ಸಚಿವ ವಿ.ಸೋಮಣ್ಣ ಟಾಂಗ್.

Promotion

ಮಂಡ್ಯ,10,2021(www.justkannada.in):  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ ಶಾಸಕ ಪ್ರೀತಂಗೌಡಗೆ ಸಚಿವ ವಿ.ಸೋಮಣ್ಣ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ವಸತಿ ಸಚಿವ ವಿ. ಸೋಮಣ್ಣ, ಶಾಸಕ ಪ್ರೀತಂಗೌಡ ಇನ್ನೂ ಹುಡುಗ. ಹಾಸನ ಜಿಲ್ಲೆಯಲ್ಲಿ ಇನ್ನೂ ಬೆಳೆಯಬೇಕಾದವನು. ಹೀಗಾಗಿ ಅವನು ಇತಿಮಿತಿಯಲ್ಲಿ ಇರಬೇಕು ಎಂದು ಸಲಹೆ ನೀಡಿದ್ದಾರೆ.

 ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ 50 ವರ್ಷ ರಾಜಕೀಯ ಇತಿಹಾಸವಿದೆ. ಹೆಚ್.ಡಿ ದೇವೇಗೌಡರು ದೇಶದ ಪ್ರಧಾನಿಗಳಾಗಿದ್ದವರು. ಅವರ ಮನೆಗೆ ಹೋಗುವುದರಲ್ಲಿ ತಪ್ಪೇನಿದೆ.? ನಾನು ಕೂಡ ದೇವೇಗೌಡರ ಮನೆ ಹೋಗಿದ್ದೆ. ಪ್ರೀತಮ್​ ಗೌಡ ಅವರು ಇಂತಹ ಮಾತುಗಳನ್ನು ಬಿಡಬೇಕು ಸಚಿವ ಸೋಮಣ್ಣ ಹೇಳಿದ್ದಾರೆ.

Key words: minister-V. Somanna Tong- MLA -Preetham Gowda.