ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ- ಹೆಚ್ ಡಿಕೆ ಕಿಡಿ.

ಬೆಂಗಳೂರು,ಆಗಸ್ಟ್,9,2021(www.justkannada.in):  ಸಚಿವ ಸ್ಥಾನ ಸಿಕ್ಕ ಬಳಿಕ ಹಲವು ಸಚಿವರು ತಮಗೆ ನೀಡಿದ ಉಸ್ತುವಾರಿ ಜಿಲ್ಲೆಗೆ ತೆರಳಿದ್ದ ವೇಳೆ ಅವರ ಬೆಂಬಲಿಗರು ಅಭಿಮಾನಿಗಳು  ಸನ್ಮಾನ ಮಾಡಿ ಅಭಿನಂದಿಸಿದ್ದರು. ಈ ವೇಳೆ ಕೋವಿಡ್ ನಿಯಮ ಉಲ್ಲಂಘನೆಯಾದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ನೆರೆ ಮತ್ತು ಕೋವಿಡ್ ಸ್ಥಿತಿಯಲ್ಲಿ ಸಚಿವ ಈ ನಡೆ ಬಗ್ಗೆ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ನೂತನ ಸಚಿವರಿಗೆ ಕುಟುಕಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು ಎಂದು ಹೆಚ್.ಡಿಕೆ ಹರಿ ಹಾಯ್ದಿದ್ದಾರೆ.

ಹೊಸ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ENGLISH SUMMARY….

Former CM HDK criticizes new cabinet
Bengaluru, August 9, 2021 (www.justkannada.in): The newly elected ministers were felicitated by their respective fans at their respective Districts after the distribution of District In-charge portfolios. COVID precautionary measures were not followed at that time which has earned criticism by the former Chief Minister H.D. Kumaraswamy.
In his tweet, the former CM said the new ministers have not received their portfolios to receive felicitation but to serve the people. Let them know that first. “Chief Minister Bommai had asked the ministers to check the floods and COVID pandemic situation after distributing District In-charge portfolios. But instead of that, the ministers are indulged in celebrations,” the tweet read.
Keywords: Former CM/ H.D. Kumaraswamy/ Chief Minister Bommai/ Ministers/ felicitations/ celebrations

Key words: ministerial position -does not -accepting –honors-former CM HD Kumaraswamy