ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಬಳಿಯೇ ಕೇಳಿ-ಸಿಎಂ ಬಿಎಸ್ ವೈ ಭೇಟಿ  ಬಳಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿಕೆ …

Promotion

ಬೆಂಗಳೂರು,ಫೆ,3,2020(www.justkannada.in): ಫೆಬ್ರವರಿ 6 ರಂದು ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಈ ನಡುವೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಹೆಚ್.ವಿಶ್ವನಾಥ್ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು ಸಚಿವ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ.  ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಬಳಿಯೇ ಕೇಳಿ ಎಂದರು.

ಸೋತವರಿಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕು ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಆ ಹೇಳಿಕೆಯ ಬಗ್ಗೆ ಪದೇ ಪದೇ ಯಾವುದೇ ಚರ್ಚೆ ಬೇಡ. ಇದರಿಂದ ಯಾವುದೇ ಪ್ರಯೋಜನ ಇಲ್ಲ. ಸಚಿವ ಸ್ಥಾನದ ಬಗ್ಗೆ ಸಿಎಂ ಬಳಿ ಚರ್ಚಿಸಲಿಲ್ಲ. ಮುಂದೆಯೂ ಚರ್ಚೆ ಮಾಡುವುದಿಲ್ಲ ಎಂದರು.

Key words: ministerial position- H.Vishwanath-meet-CM BS yeddyurappa