ಉಪಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರಿಗಿಲ್ಲ ಸಚಿವ ಸ್ಥಾನ:  11ರ ಪೈಕಿ 8 ಮಂದಿಗೆ ಮಾತ್ರ ಮಂತ್ರಿಗಿರಿ…?

ಬೆಂಗಳೂರು,ಜ,11,2020(www.justkannada.in): ಉಪಚುನಾವಣೆಯಲ್ಲಿ ಗೆದ್ದ 11 ಮಂದಿಗೆ ಸಚಿವ ಸ್ಥಾನ ನೀಡಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಮುಂದಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ನೀಡಿದೆ.

ರಾಜೀನಾಮೆ ಕೊಟ್ಟು ಸಮ್ಮಿಶ್ರ ಸರ್ಕಾರ ಬೀಳಿಸಿ ಶಾಸಕ ಸ್ಥಾನದಿಂದ ಅನರ್ಹರಾಗಿ ಬಳಿಕ ಉಪಚುನಾವಣೆಯಲ್ಲಿ ಗೆದ್ದು  ಬಂದ 11 ಮಂದಿ ಶಾಸಕರ ಪೈಕಿ 8 ಮಂದಿಗೆ ಮಾತ್ರ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್  ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. ಈ ಮೂಲಕ ಉಪಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರಿಗೆ ಸಚಿವ ಸ್ಥಾನ ಇಲ್ಲ ಎನ್ನಲಾಗುತ್ತಿದೆ.

ಅಥಣಿಯಲ್ಲಿ ಗೆದ್ದ ಶಾಸಕ ಮಹೇಶ್ ಕುಮುಟಳ್ಳಿ  ಕಾಗವಾಡದಲ್ಲಿ ಗೆಲುವು ಸಾಧಿಸಿರುವ ಶ್ರೀಮಂತ ಪಾಟೀಲ್ ರನ್ನ ಸಚಿವ ಸ್ಥಾನದಿಂದ ಕೈಬಿಡುವ ಸಾಧ್ಯತೆ ಇದೆ. ಇಬ್ಬರಿಗೆ ಸಚಿವ ಸ್ಥಾನದಿಂದ ಕೋಕ್ ಕೊಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಮೊದಲು ಬಿಜೆಪಿ ಹೈಕಮಾಂಡ್ ಗೆದ್ದ 11 ಮಂದಿ ಪೈಕಿ  6 ಮಂದಿಗೆ ಸಚಿವ ಸ್ಥಾನ ನೀಡಲು ಒಪ್ಪಿಗೆ ಸೂಚಿಸಿತ್ತು. ಆದರೆ ಹೆಚ್ಚುವರಿ ಸ್ಥಾನ ನೀಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಒತ್ತಡ ಹಾಕಿದ ಹಿನ್ನೆಲೆ  8 ಶಾಸಕರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.

Key words: ministerial position -not – all MLA-  by-election- BJP High Command