ಜನರಿಂದ ಆಯ್ಕೆಯಾದವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು : ಶಾಸಕ ಎಂ.ಪಿ.ರೇಣುಕಾಚಾರ್ಯ

Promotion

ದಾವಣಗೆರೆ,ನವೆಂಬರ್,16,2020(www.justkannada.in) :  ಜನರಿಂದ ಆಯ್ಕೆಯಾದವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು. ಇವರು ಸೋತವರಿಗೂ ಸಚಿವ ಸ್ಥಾನ ನೀಡುತ್ತಾರೆ ಎನ್ನುವುದಾದರೆ ಜನರು ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.kannada-journalist-media-fourth-estate-under-lossಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಗೂ ಸಚಿವ ಸ್ಥಾನ ನೀಡಬೇಕು. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕರು ಸಭೆ ನಡೆಸಿ ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದೇವೆ. ಸಚಿವ ಸ್ಥಾನ ನೀಡುವುದು ಯಡಿಯೂರಪ್ಪನವರ ನಿರ್ಧಾರಕ್ಕೆ ಬಿಟ್ಟಿದ್ದು, ಅವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ministerial,position,should,given,only,people,elected,MLA M.P.Renukaacharya

key words : ministerial-position-should-given-only-people-elected-MLA M.P.Renukaacharya