ಕೊರೋನಾ ನಿಯಂತ್ರಣ ಕುರಿತು ಏ.19 ರಂದು ಮಹತ್ವದ ಸಭೆ…

Promotion

ಬೆಂಗಳೂರು,ಏಪ್ರಿಲ್,17,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ತಲ್ಲಣ ಸೃಷ್ಠಿಸಿದೆ. ಹೀಗಾಗಿ ಕೊರೋನಾ ತಡೆಗಾಗಿ ಏಪ್ರಿಲ್ 19 ರಂದು ಸೋಮವಾರ ಸಭೆ ಕರೆಯಲಾಗಿದೆ.jk

ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಸೋಮವಾರ ಮಧ್ಯಾಹ್ನ 3 ಗಂಟೆಗೆ  ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬೆಂಗಳೂರಿನ  ಸಚಿವರು, ಶಾಸಕರು ಸಂಸದರು ಪಾಲ್ಗೊಳ್ಳಲಿದ್ದು ಕರೋನಾ ನಿಯಂತ್ರಣ ಸಂಬಂಧ ಚರ್ಚೆ ನಡೆಸಲಿದ್ದಾರೆ.ministers-Important- meeting – Corona- control-bangalore

ಸಿಎಂ ಬಿಎಸ್ ಯಡಿಯೂರಪ್ಪ ನಿರ್ದೇಶನದಂತೆ ಈ ಮಹತ್ವದ ಸಭೆ ನಡೆಯುತ್ತಿದೆ. ಇಂದು ಸಹ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದರು.

Key words: ministers-Important- meeting – Corona- control-bangalore