ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವೇ..? ಇಡಿ ದಾಳಿ ಕುರಿತು ಶಾಸಕ ಜಮೀರ್ ಅಹ್ಮದ್ ಖಾನ್ ಅಸಮಾಧಾನ.

Promotion

ಬೆಂಗಳೂರು,ಆಗಸ್ಟ್,21,2021(www.justkannada.in):  ಇಡಿ ಅಧಿಕಾರಿಗಳ ನಿರೀಕ್ಷೆ ಹುಸಿಯಾಗಿದೆ. ಮುಸ್ಲೀಂ ನಾಯಕರನ್ನ ಟಾರ್ಗೆಟ್ ಮಾಡಿ ಕಿರುಕುಳ ನೀಡುವ ಕೆಲಸವಾಗುತ್ತಿದೆ. ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವಾಯಿತೇ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹ್ಮದ್ ಖಾನ್, ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ.ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ ಎಂದು ಹೇಳಿದ್ದಾರೆ.

ನಾನು ಮನೆಯನ್ನು ಕಟ್ಟಿಸಿದ್ದೆ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ ದಾಳಿಯಾಯಿತು. ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ ಎಂದು ಶಾಸಕ ಜಮೀರ್ ತಿಳಿಸಿದ್ದಾರೆ.

Key words: MLA -Jameer Ahmed Khan-  ED –attack-house