ಮೈಕ್‌ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಅಜಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್ ಈಶ್ವರಪ್ಪ.

Promotion

ಮಂಗಳೂರು,ಮಾರ್ಚ್,13,2023(www.justkannada.in):  ಮಸೀದಿಗಳಲ್ಲಿ ಕೂಗುವ ಆಜಾನ್‌ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ‌ ನೀಡಿದ್ದಾರೆ.

ಮಂಗಳೂರಿನ ಕಾವೂರಿನ ಶಾಂತಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ  ಮಾತನಾಡಿದ ಶಾಸಕ ಕೆ.ಎಸ್.ಈಶ್ವರಪ್ಪ, ನಾನು ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು  ಹೇಳಿ ಟೀಕೆಗೆ ಗುರಿಯಾಗಿದ್ದಾರೆ.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಕೆ.ಎಸ್.ಈಶ್ವರಪ್ಪ ಭಾಷಣ ಮಾಡುತ್ತಿದ್ದ ವೇಳೆ ಸ್ಥಳೀಯ ಮಸೀದಿಯಿಂದ ಆಜಾನ್‌ ಕೇಳಿದ್ದು, ಈ ವೇಳೆ ಮಾತನಾಡಿದ ಅವರು,  ನಾನು ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್‌ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಅನ್ನುತ್ತೇವೆ. ಸುಪ್ರೀಂಕೋರ್ಟ್ ಆದೇಶವಿದ್ದು ಇಂದಲ್ಲ, ನಾಳೆ ಈ ಸಮಸ್ಯೆ ಇತ್ಯರ್ಥವಾಗಲಿದೆ. ಇದರಲ್ಲಿ ಯಾವುದೇ ಅನುಮಾನಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್‌ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳುವುದಾ? ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ‌. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ ಎಂದಿದ್ದಾರೆ.

Key words: MLA-KS Eshwarappa- controversial statement- about- Azan.