ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಸಚಿವರು ರಾಜೀನಾಮೆ ನೀಡಿದ್ದೇಕೆ..? – ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ.

ಕಲ್ಬುರ್ಗಿ,ಆಗಸ್ಟ್,13,2022(www.justkannada.in):  ಸರ್ಕಾರಿ ನೌಕರಿ ಪಡೆಯಬೇಕಾದರೇ ಯುವತಿಯರು ಮಂಚ ಹತ್ತಬೇಕು. ಯುವಕರು ಲಂಚ ಕೊಡಬೇಕು  ಎಂದು ಹೇಳಿಕೆ ನೀಡಿದ್ಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ  ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡು ಟ್ವೀಟ್ ಮಾಡಿದ್ದಾರೆ.

ನಾನು ‘ಲಂಚ ಮಂಚದ ಸರ್ಕಾರ’ ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ! ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ! ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಬಿಜೆಪಿ ಸಂಸದರು, ಮಂತ್ರಿಗಳು, ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ? ಎಂದು ಬಿಜೆಪಿಗೆ ಪ್ರಶ್ನಿಸುವ ಮೂಲಕ ಶಾಸಕ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ  ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು , ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

Key words: MLA- Priyank Kharge- defended –his- statement.