ಗ್ರಾ.ಪಂ ಚುನಾವಣೆಯಲ್ಲಿ  ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ- ಡಿ.ಕೆ ಶಿವಕುಮಾರ್..

Promotion

ಬೆಂಗಳೂರು,ಡಿಸೆಂಬರ್,17,2020(www.justkannada.in):  ಗ್ರಾಮಪಂಚಾಯತ್ ಚುನಾವಣೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.Teachers,solve,problems,Government,bound,Minister,R.Ashok

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮತ್ತು ತಮ್ಮನ್ನ ಭೇಟಿ ಮಾಡಿದ ಕುರಿತು ಪ್ರತಿಕ್ರಿಯಿಸಿದ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನ ಬೆಂಬಲಿಸಲಿದ್ದಾರೆ. ಈ ವಿಚಾರವಾಗಿ ನನ್ನನ್ನ ಭೇಟಿಯಾಗಿ ಚರ್ಚೆ ನಡೆಸಿದರು ಎಂದು ಹೇಳಿದರು.

ಹೊಸಕೋಟೆ ಉಪಚುನಾವಣೆ ಬಿಜೆಪಿಯಿಂದ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಿದ ಹಿನ್ನೆಲೆ  ಶರತ್ ಬಚ್ಚೇಗೌಡ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

Key words:  MLA -Sharath Bachegowda – support-Congress – GP election-DK Sivakumar.