ಸೌಮ್ಯಾ ರೆಡ್ಡಿ ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಬೆಂಗಳೂರು,ಜನವರಿ,23,2021(www.justkannada.in):  ಕಾಂಗ್ರೆಸ್ ಧರಣಿ ನಡೆಸುತ್ತಿದ್ದ ವೇಳೆ ಶಾಸಕಿ ಸೌಮ್ಯರೆಡ್ಡಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ ವಿಚಾರ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪೊಲೀಸರು  ಶಾಸಕಿ ಸೌಮ್ಯರೆಡ್ಡಿ ಅವರನ್ನ ಎಳೆದಾಡಿದ್ದಾರೆ. ಹೀಗಾಗಿ ಸ್ವಯಂ ರಕ್ಷಣೆಗೋಸ್ಕರ ಹಾಗೆ ಮಾಡಿದ್ದಾರೆ. ಸೌಮ್ಯಾ ರೆಡ್ಡಿ ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ ಎಂದು ಹೇಳಿದರು.jk

ಈ ಕುರಿತು ಇಂದು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ಶಾಸಕಿ ಸೌಮ್ಯ ರೆಡ್ಡಿ ಅವರು ತಮ್ಮ ವೈಯಕ್ತಿಕ ರಕ್ಷಣೆಗಾಗಿ ತಮ್ಮನ್ನು ಎಳೆದಾಡುತ್ತಿದ್ದ ಪೊಲೀಸರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.  ನಾವು ಎಷ್ಟೇ ಸಹಕಾರ ಕೊಟ್ಟರೂ ವ್ಯವಸ್ಥಿತ ಸಂಚಿನಿಂದಾಗಿ ಪೊಲೀಸರು ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.mla- Soumya Reddy –arrest- we will -stand -KPCC President- DK Sivakumar.

ಸೌಮ್ಯ ರೆಡ್ಡಿ ಮೇಲೆ ಎಫ್ ಐಆರ್ ದಾಖಲಿಸುವ ಪೊಲೀಸರು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಟ್ಟು ಗಲಭೆಗೆ ಕಾರಣವಾದಾಗ ಸುಮೋಟೋ ಪ್ರಕರಣ ಯಾಕೆ ದಾಖಲಿಸಲಿಲ್ಲ? ಎಂದು ಪ್ರಶ್ನಿಸಿದ ಡಿ.ಕೆ ಶಿವಕುಮಾರ್,  ಸೌಮ್ಯಾ ರೆಡ್ಡಿ ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ. ನಮ್ಮ ಬಳಿಯೂ ಸಾಕ್ಷ್ಯಗಳಿವೆ. ನಾವು ಅದನ್ನು ಮುಂದಿಡುತ್ತೇವೆ. ನಾನು ಧರಣಿ ಸ್ಥಳದಲ್ಲೇ ಇದ್ಧೆ ಆಕೆ ಕೆಳಗೆ ಬಿದ್ದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ,  ಈ ಕೃತ್ಯದ ಹಿಂದೆ ಸರ್ಕಾರದ ಕೈವಾಡ ಇದೆ. ಸರ್ಕಾರ ಹೇಳದೆ ಯಾವ ಎಫ್ ಐಆರ್ ಹಾಕಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದರು.

Key words: mla- Soumya Reddy –arrest- we will -stand -KPCC President- DK Sivakumar.