ಸಚಿವ ಸ್ಥಾನಕ್ಕಾಗಿ ಹಲವರಿಂದ ಲಾಬಿ: ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾಗಿ  ಚರ್ಚಿಸಿದ ಶಾಸಕ ಉಮೇಶ್ ಕತ್ತಿ…..

Promotion

ಬೆಂಗಳೂರು,ಡಿ,17,2019(www.justkannada.in): ಉಪಚುನಾವಣೆಯಲ್ಲಿ 12 ಸ್ಥಾನ ಗೆದ್ದು ರಾಜ್ಯ ಬಿಜೆಪಿ ಸರ್ಕಾರ ಸುಭದ್ರವಾದ ಬೆನ್ನಲ್ಲೆ ಸಚಿವ ಸ್ಥಾನಕ್ಕಾಗಿ ಬಿಜೆಪಿಯ ಹಲವು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಈ ನಡುವೆ ಮಂತ್ರಿಗಿರಿಯ ಪ್ರಬಲ ಆಕಾಂಕ್ಷಿಯಾಗಿರುವ ಹಿರಿಯ ಶಾಸಕ ಉಮೇಶ್ ಕತ್ತಿ ಪದೇ ಪದೇ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಒತ್ತಡ ಹಾಕುತ್ತಿದ್ದಾರೆ.

ಈ ಮಧ್ಯೆ ಇಂದು ಸಹ ಹಿರಿಯ ಶಾಸಕ ಉಮೇಶ್ ಕತ್ತಿ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾದ  ಉಮೇಶ್ ಕತ್ತಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಶಾಸಕ ಉಮೇಶ್ ಕತ್ತಿ ಸೇರಿ ಹಲವು ಶಾಸಕರು ಪಟ್ಟು ಹಿಡಿದಿದ್ದು ಸಂಪುಟ ವಿಸ್ತರಣೆ ಸಿಎಂ ಬಿಎಸ್ ವೈಗೆ ತಲೆ ಬಿಸಿ ತರಲಿದೆ. ಇನ್ನು ಡಿಸೆಂಬರ್ 22ರ ನಂತರ ಸಂಪುಟ ವಿಸ್ತರಣೆ ಎಂದು ಸಿಎಂ ಬಿಎಸ್ ವೈ ಈಗಾಗಲೇ ತಿಳಿಸಿದ್ದಾರೆ . ಖಾಲಿ ಉಳಿದಿರುವ ಸಚಿವ ಸ್ಥಾನಗಳ ಪೈಕಿ ಈಗಾಗಲೇ ಉಪಚುನಾವಣೆಯಲ್ಲಿ ಗೆದ್ದಿರುವ 11 ಮಂದಿ ಶಾಸಕರಿಗೆ ಸಚಿವ ಸ್ಥಾನ ಖಚಿತವಾಗಿದೆ.

Key words: MLA- Umesh katti-met – CM BS Yeddyurappa- discussed