ಧಾರವಾಡ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ.

Promotion

ಬೆಂಗಳೂರು, ಸೆಪ್ಟೆಂಬರ್​​ 23,2023(www.justkannada.in):  ಬಿಜೆಪಿ ಮುಖಂಡ ಯೋಗೀಶ್ ಗೌಡರ್  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಷರತ್ತು ಸಡಿಲಿಕೆ ಮಾಡಬೇಕೆಂದು ಕೋರಿ  ಶಾಸಕ ವಿನಯ್ ಕುಲಕರ್ಣಿ  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿಗೆ ಅವಕಾಶ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಅರ್ಜಿಯನ್ನ ವಜಾಗೊಳಿಸಿ ಆದೇಶ ನೀಡಿದೆ. ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ.

ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಸಿಬಿಐ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದರು.

Key words: MLA- Vinay Kulkarni- petition – rejected- relaxation – conditions – entry – Dharwad