ವಿಧಾನಸೌಧದಲ್ಲೇ ಡಕಾಯಿತರು ಸಿಗುತ್ತಾರೆ ಎಂಬ ಹೆಚ್.ಡಿಕೆ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಯತೀಂದ್ರ ಸಿದ್ಧರಾಮಯ್ಯ.

Promotion

ಮೈಸೂರು,ಆಗಸ್ಟ್,20,2022(www.justkannada.in):  ವಿಧಾನಸೌಧಲ್ಲೇ ಡಕಾಯಿತರು ಸಿಗುತ್ತಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಯನ್ನ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ‍್ಧರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ,  ಹೌದು, ರಾಜಕಾರಣಕ್ಕೆ ಅಂತಹ ದುಸ್ಥಿತಿ ಬಂದಿದೆ. ರಾಜಕಾರಣದಲ್ಲಿ ಇರೋರು ಒಂದು ರೀತಿ ಡಕಾಯತರ ರೀತಿ ಆಗಿದ್ದಾರೆ. ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಆ ಅರ್ಥದಲ್ಲಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಎಂದರು.

ನಿನ್ನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ  ಜೆಡಿಎಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಮಾತನಾಡುತ್ತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮೊದಲು ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿತ್ತು. ಈಗ ವಿಧಾನಸೌಧಕ್ಕೆ ಹೋದರೆ ಸಾಕು. ಅಷ್ಟರಮಟ್ಟಿಗೆ ಜನರ ದುಡ್ಡು ಲೂಟಿಯಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು.

Key words: MLA- Yathindra Siddaramaiah -defended –HD Kumaraswamy- statement